ಶನಿವಾರ, ಮೇ 15, 2021
24 °C

ತರಕಾರಿಗಳ ಬೆಲೆ ಗಗನಕ್ಕೆ: ಶಿವಯೋಗಿಸ್ವಾಮಿ ಆತಂಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: `ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ತರಕಾರಿ ಬೆಲೆ ಗಗನಕ್ಕೆ ಏರುತ್ತಿದ್ದು, ಮಾರುಕಟ್ಟೆ ದಲ್ಲಾಳಿಗಳ ಕಪಿಮುಷ್ಠಿಯಲ್ಲಿ ಸಿಲುಕಿದೆ' ಎಂದು ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯಸಚೇತಕ ಡಾ.ಎ.ಎಚ್.ಶಿವಯೋಗಿಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.ವಿಧಾನಪರಿಷತ್‌ನಲ್ಲಿ ಶುಕ್ರವಾರ `ನಿಯಮ 330ಎ' ಅಡಿಯಲ್ಲಿ ವಿಷಯ ಮಂಡಿಸಿದ ಅವರು, `ಬೆಲೆಯೇರಿಕೆಗೆ ಕಡಿವಾಣ ಹಾಕುವ ವ್ಯವಸ್ಥೆ ನಮ್ಮಲ್ಲಿ ಇಲ್ಲ. ಕೃಷಿ ಉತ್ಪನ್ನಗಳ ಸಂಪೂರ್ಣ ಲಾಭವನ್ನು ಮಧ್ಯವರ್ತಿಗಳು ಪಡೆಯುತ್ತಿದ್ದಾರೆ. ಬೆಲೆಯೇರಿಕೆ ವಿರುದ್ಧ ಗ್ರಾಹಕರು ಸಹ ಹೋರಾಟ ಮಾಡುತ್ತಿಲ್ಲ' ಎಂದು ಬೇಸರ ವ್ಯಕ್ತಪಡಿಸಿದರು.`ಮಾರುಕಟ್ಟೆಯಲ್ಲಿ ತರಕಾರಿಗಳ ಬೆಲೆ ಹಾಪ್‌ಕಾಮ್ಸ ಬೆಲೆಗಿಂತ ಶೇ 20 ಅಧಿಕ ಇರುತ್ತದೆ. ರಾಜ್ಯ ಸರ್ಕಾರ ರೈತರು ಹಾಗೂ ಗ್ರಾಹಕರ ನೆರವಿಗೆ ಧಾವಿಸಬೇಕು' ಎಂದು ಶಿವಯೋಗಿ ಸ್ವಾಮಿ ಆಗ್ರಹಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.