ಬೆಂಗಳೂರು: ‘ವಿದ್ಯಾರ್ಥಿಗಳು ತರಬೇತಿ ಅವಧಿಯನ್ನು ಸದುಪಯೋಗಪಡಿಸಿಕೊಂಡು ಹೆಚ್ಚಿನ ಸಂಶೋಧನೆಗೆ ಮುಂದಾಗಬೇಕು’ ಎಂದು ಎಂ.ಎಸ್.ರಾಮಯ್ಯ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ಎಸ್.ವೈ.ಕುಲಕರ್ಣಿ ಹೇಳಿದರು.

ಎಂ.ಎಸ್.ರಾಮಯ್ಯ ತಾಂತ್ರಿಕ ಮಹಾವಿದ್ಯಾಲಯ ಮತ್ತು ಅಮೆರಿಕದ ಕಾರ್ನೆಗಿ ಮೆಲಾನ್ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಆಯೋಜಿಸಿರುವ ‘ವಿಂಟರ್ ಸ್ಕೂಲ್’ ಇಂಟರ್ನ್ಶಿಪ್ ಕಾರ್ಯಕ್ರಮವನ್ನು ಸೋಮವಾರ ಉದ್ಘಾಟಿಸಿ ಅವರು ಮಾತನಾಡಿದರು.

ಈ ರೀತಿಯ ತರಬೇತಿ ಕಾರ್ಯಕ್ರಮಗಳು ವಿದ್ಯಾರ್ಥಿಗಳನ್ನು ಹೆಚ್ಚಿನ ಕಲಿಕೆಗೆ ಪ್ರೋತ್ಸಾಹಿಸುತ್ತವೆ. 15 ದಿನಗಳ ತರಬೇತಿ ಕಾರ್ಯಕ್ರಮದಲ್ಲಿ ನವದೆಹಲಿ, ಮುಂಬೈ, ಹೈದರಾಬಾದ್ ಸೇರಿದಂತೆ ವಿವಿಧ ಐಐಟಿ ಮತ್ತು ಎನ್ಐಟಿ ಕಾಲೇಜುಗಳ 60 ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ ಎಂದರು.

ಕಾರ್ನೆಗಿ ಮೆಲಾನ್ ವಿಶ್ವವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ವಿಭಾಗದ ಪ್ರಾಧ್ಯಾಪಕ ಡಾ.ಭಿಕ್ಷಾರಾಜ್ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಹೊರಹಾಕಲು ಇದು ಉತ್ತಮ ಅವಕಾಶವಾಗಿದೆ ಎಂದು ಅವರು ಹೇಳಿದರು.

ತರಬೇತಿ ಅವಧಿಯಲ್ಲಿ ಆಯ್ದ ವಿಷಯಗಳ ಕುರಿತು ವಿದ್ಯಾರ್ಥಿಗಳು ಸಂಶೋಧನೆ ನಡೆಸಲಿದ್ದು ಅಂತಿಮ ದಿನ ಸಂಶೋಧನಾ ಪ್ರಬಂಧವನ್ನು ಮಂಡಿಸಲಿದ್ದಾರೆ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.