ಶಿವಮೊಗ್ಗ: ಗ್ರಾಮೀಣ ಭಾಗದಲ್ಲಿನ ಪ್ರತಿಭೆಗಳಿಗೆ ಸೂಕ್ತ ಮಾರ್ಗದರ್ಶನವಿಲ್ಲದೆ ಸ್ಪರ್ಧಾತ್ಮಕ ಪರೀಕ್ಷೆಗಳಿಂದ ವಂಚಿತರಾಗುತ್ತಿದ್ದಾರೆ. ಅಂತಹವರನ್ನು ಗುರುತಿಸಿ, ಸಜ್ಜುಗೊಳಿಸುವ ಕೆಲಸವನ್ನು ‘ಬೇಸ್’ ಸಂಸ್ಥೆ ಮಾಡಲಿದೆ ಎಂದು ಬೆಂಗಳೂರಿನ ಸಂಸ್ಥೆಯ ಸಂಸ್ಥಾಪಕ ನಿರ್ದೇಶಕ ಡಾ.ಎಚ್.ಎಸ್. ನಾಗರಾಜ್ ತಿಳಿಸಿದರು.

ನಗರದ ವಾಸವಿ ಮಹಾವಿದ್ಯಾಲಯದ ಆವರಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ‘ಬೇಸ್’ ತರಬೇತಿ ಸಂಸ್ಥೆಯ ಶಾಖೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸ್ಪರ್ಧಾತ್ಮಕ ಪರೀಕ್ಷೆಗಳು ದೊಡ್ಡ ನಗರಗಳ ವಿದ್ಯಾರ್ಥಿಗಳಿಗೆ ಮಾತ್ರ ಸೀಮಿತವಾಗಿವೆ. ಗ್ರಾಮೀಣ ಪ್ರದೇಶದಲ್ಲಿನ ಪ್ರತಿಭೆಗಳನ್ನು ಇಂತಹ ಅವಕಾಶ ಕಲ್ಪಿಸಲು ಈ ಕೇಂದ್ರದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ ನೀಡಲಾಗುವುದು ಎಂದರು.

ಕಳೆದ ಸಾಲಿನಲ್ಲಿ ಐಐಟಿ ಪರೀಕ್ಷೆಯಲ್ಲಿ ರಾಜ್ಯದಿಂದ 105ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಇದರಲ್ಲಿ 37 ವಿದ್ಯಾರ್ಥಿಗಳು ‘ಬೇಸ್’ ಸಂಸ್ಥೆಯಲ್ಲಿ ತರಬೇತಿ ಪಡೆದವರಾಗಿದ್ದಾರೆ ಎಂದು ಮಾಹಿತಿ ನೀಡಿದರು.

ಬೆಂಗಳೂರಿನ ಐಐಎಸ್ಸಿಯ ಸಹಾಯಕ ಪ್ರಾಧ್ಯಾಪಕ ಡಾ.ಚಂದ್ರ ಆರ್. ಮೂರ್ತಿ ಉದ್ಘಾಟಿಸಿರು. ಶಿವಮೊಗ್ಗ ಶಾಖೆಯ ಉಸ್ತುವಾರಿ ಸೀತಾಲಕ್ಷ್ಮೀ, ಆಡಳಿತಾಧಿಕಾರಿ ನಂಜುಂಡಯ್ಯ ಉಪಸ್ಥಿತರಿದ್ದರು. ವಾಸವಿ ವಿದ್ಯಾಲಯದ ಕಾರ್ಯದರ್ಶಿ ಎಸ್.ಕೆ. ಶೇಷಾಚಲ ಅಧ್ಯಕ್ಷತೆ ವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.