ಕೋಲ್ಕತ್ತ (ಪಿಟಿಐ): ಪಾಕಿಸ್ತಾನದ ಮಾಜಿ ವೇಗದ ಬೌಲರ್ ವಕಾರ್ ಯೂನಿಸ್ ಮತ್ತು ಸ್ಪಿನ್ ಮಾಂತ್ರಿಕ ಶ್ರೀಲಂಕಾದ ಮುತ್ತಯ್ಯ ಮುರಳೀಧರನ್ ಅವರು ಬಂಗಾಳದ ಯುವ ಕ್ರಿಕೆಟಿಗರಿಗೆ ತರಬೇತಿ ನೀಡಲಿದ್ದಾರೆ.

ಈ ಇಬ್ಬರೂ ಕ್ರಿಕೆಟಿಗರ ಜೊತೆಗೆ ಬಂಗಾಳ ಕ್ರಿಕೆಟ್ ಸಂಸ್ಥೆ (ಸಿಎಬಿ) ಮೂರು ವರ್ಷಗಳ ಅವಧಿಗೆ ಒಪ್ಪಂದ ಮಾಡಿ ಕೊಂಡಿದೆ. ಮುರಳೀಧರನ್ ಹಾಗೂ ವಕಾರ್ ಅವರು ತಂಡಕ್ಕೆ ಸಲಹೆಗಾರರಾಗಿ ಕೆಲಸ ಮಾಡಲಿದ್ದಾರೆ. ಇದಕ್ಕಾಗಿ ₨ ತಲಾ 60 ಲಕ್ಷ ಸಂಭಾವನೆ ನೀಡಲಾಗುತ್ತದೆ.

ರಾಜ್ಯ ತಂಡವನ್ನು ಬಲಿಷ್ಠ ಮಾಡುವ ಸಲುವಾಗಿ ಸಿಎಬಿ ಆಗಾಗ್ಗೆ ಹಲವು ಕಾರ್ಯಕ್ರಮ ಗಳನ್ನು ಹಮ್ಮಿಕೊಳ್ಳುತ್ತಿದೆ. ಭಾರತ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಒಂದು ತಿಂಗಳು ತಂಡಕ್ಕೆ ತರಬೇತಿ ನೀಡಿದ್ದರು. ಶಿಬಿರದ ಮೊದಲ ಹಂತವಾಗಿ 200 ಯುವ ಆಟಗಾರರಿಗೆ ವಿಶ್ವದ ಶ್ರೇಷ್ಠ ಕ್ರಿಕೆಟಿಗರ ಕೈಯಲ್ಲಿ ತರಬೇತಿ ಪಡೆಯುವ ಅವಕಾಶ ಲಭಿಸಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.