ಗುರುವಾರ , ಜೂನ್ 24, 2021
21 °C
ಚಿಕ್ಕೋಡಿ, -ಬೆಳಗಾವಿ ಲೋಕಸಭಾ ಕ್ಷೇತ್ರ

ತಲಾ ಒಂದು ನಾಮಪತ್ರ ಸಲ್ಲಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಲೋಕಸಭಾ ಚುನಾವಣೆಗಾಗಿ ನಾಮಪತ್ರ ಸಲ್ಲಿಸಲು ಮೂರನೆಯ ದಿನವಾದ ಶನಿವಾರ ಬೆಳಗಾವಿ ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರಗಳಿಗೆ ತಲಾ ಒಂದು ನಾಮಪತ್ರ ಸಲ್ಲಿಕೆಯಾಗಿವೆ.ಚಿಕ್ಕೋಡಿ ಲೋಕಸಭಾ ಕ್ಷೇತ್ರಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ಶ್ರೇಣಿಕ ಅಣ್ಣಾಸಾಬ ಜಂಗಟೆ ನಾಮಪತ್ರ ಸಲ್ಲಿಸಿದ್ದಾರೆ ಎಂದು ಚುನಾವಣಾಧಿಕಾರಿ ದೀಪಾ ಚೋಳನ್ ತಿಳಿಸಿದ್ದಾರೆ.ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಸ್ವತಂತ್ರ ಅಭ್ಯರ್ಥಿಯಾಗಿ ಶಿವಗೌಡಪ್ಪ ಬಾಳಪ್ಪ ಖಾನಗೌಡರ ಅವರು ನಾಮಪತ್ರ ಸಲ್ಲಿಸಿದ್ದಾರೆ ಎಂದು ಚುನಾವಣಾಧಿಕಾರಿ ಎನ್.ಜಯರಾಂ ಅವರು ತಿಳಿಸಿದ್ದಾರೆ.₨ 42 ಲಕ್ಷ ಒಡೆಯ ಖಾನಗೌಡರ

ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ಶುಕ್ರವಾರ ನಾಮಪತ್ರ ಸಲ್ಲಿಸಿರುವ ಎಸ್‌.ಬಿ.ಖಾನಗೌಡರ ಅವರ ಒಟ್ಟು ₨ 42,20,000 ಆಸ್ತಿ ಒಡೆಯ.ಯಾವುದೇ ವಾಹನವನ್ನು ಹೊಂದಿರದ ಖಾನಗೌಡರ ಅವರು, ವಿವಿಧ ಸಹಕಾರಿ ಬ್ಯಾಂಕುಗಳಲ್ಲಿ ₨ 8,28,000 ಠೇವಣಿ ಇಟ್ಟಿದ್ದಾರೆ. ₨ 10 ಲಕ್ಷ ಮೌಲ್ಯದ ಭೂಮಿ, 50 ಗ್ರಾಂ ಚಿನ್ನ, ತಲಾ ₨ 12 ಲಕ್ಷ ಮೌಲ್ಯದ ಎರಡು ಮನೆಗಳನ್ನು ಹೊಂದಿದ್ದಾರೆ. 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.