ಕೃಷ್ಣರಾಜಪುರ: ‘ವಿದ್ಯಾರ್ಥಿಗಳು ನಿರ್ದಿಷ್ಟ ಗುರಿ ಹೊಂದಿರಬೇಕು. ಆ ಗುರಿ ತಲುಪುವ ನಿಟ್ಟಿನಲ್ಲಿ ಪೂರಕವಾಗಿ ತಯಾರಿ ನಡೆಸಬೇಕು. ಎಂತಹ ಸಂದರ್ಭ ಬಂದರೂ ವಿಚಲಿತರಾಗದೇ ಸೂಕ್ತ ನಿರ್ಧಾರ ತೆಗೆದುಕೊಳ್ಳುವ ಮನೋಭಾವ ಬೆಳೆಸಿಕೊಳ್ಳಬೇಕು’ ಎಂದು ರಾಜ್ಯ ಜಲ ಸಂಪನ್ಮೂಲ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಿ.ಸತ್ಯಮೂರ್ತಿ ಹೇಳಿದರು.

ಕೇಂಬ್ರಿಡ್ಜ್ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಏರ್ಪಡಿಸಿದ್ದ ಭಾರತೀಯ ತಾಂತ್ರಿಕ ಶಿಕ್ಷಣ ಸಮಿತಿಯ 7ನೇ ವಾರ್ಷಿಕ ಸಭೆಯಲ್ಲಿ ಅವರು ಮಾತನಾಡಿದರು.

‘ತಂತ್ರಜ್ಞಾನ ಕ್ಷೇತ್ರದಲ್ಲಿ ಆವಿಷ್ಕಾರಗಳಾದಂತೆ ಅದು ಪ್ರಕೃತಿ ನಿಯಮದಿಂದ ದೂರ ಸರಿಯುತ್ತಿದೆ ಎಂಬ ಭಾವನೆ ಮೂಡುವುದು ಸಹಜ. ಆದರೆ ತಾಂತ್ರಿಕ ಕ್ಷೇತ್ರದ ಬೆಳವಣಿಗೆಯಿಂದ ದೇಶದ ಅಭಿವೃದ್ಧಿ ಸಾಧ್ಯ. ವಿದ್ಯಾರ್ಥಿಗಳು ಕೌಶಲ್ಯ ಹಾಗೂ ಉತ್ತಮ ಜ್ಞಾನ ಪಡೆಯಬೇಕು’ ಎಂದು ಕಿವಿಮಾತು ಹೇಳಿದರು.

ಭಾರತೀಯ ತಾಂತ್ರಿಕ ಶಿಕ್ಷಣ ಸಮಿತಿ ಅಧ್ಯಕ್ಷ ಡಾ.ಎನ್.ಆರ್.ಶೆಟ್ಟಿ ಮಾತನಾಡಿದರು. ಸಮಿತಿ ರಾಜ್ಯ ಘಟಕದ ಅಧ್ಯಕ್ಷ ಡಾ.ಎಂ.ಬಸವರಾಜ್, ಶಿರಡಿ ಸಾಯಿ ತಾಂತ್ರಿಕ ಕಾಲೇಜಿನ ಪ್ರಾಚಾರ್ಯ ಡಾ.ಜೆ.ಯು.ಗೋವಿಂದರಾಜು, ಕೇಂಬ್ರಿಡ್ಜ್ ತಾಂತ್ರಿಕ ವಿದ್ಯಾಲಯದ ಪ್ರಾಚಾರ್ಯ ಡಾ.ಬಿ.ವಿ. ರವಿಶಂಕರ್ ಸೇರಿದಂತೆ ಬೋಧಕ ವರ್ಗದವರು ಉಪಸ್ಥಿತರಿದ್ದರು. ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಅಧ್ಯಕ್ಷ ಡಿ.ಕೆ.ಮೋಹನ್ ಸ್ವಾಗತಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.