ಶನಿವಾರ, ಜೂಲೈ 11, 2020
21 °C

ತಾ.ಪಂ. ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತಾ.ಪಂ. ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ಆನೇಕಲ್ : ಇಲ್ಲಿನ ತಾಲ್ಲೂಕು ಪಂಚಾಯಿತಿ  ಅಧ್ಯಕ್ಷರಾಗಿ ಬೊಮ್ಮಸಂದ್ರ ಕ್ಷೇತ್ರದ ಬಿಜೆಪಿ ಸದಸ್ಯೆ  ತೇಜಶ್ರೀ ನಟರಾಜ್ ಮತ್ತು ಉಪಾಧ್ಯಕ್ಷರಾಗಿ ವೀರಸಂದ್ರ ಕ್ಷೇತ್ರದ ಶ್ರೀನಿವಾಸರೆಡ್ಡಿ ಶುಕ್ರವಾರ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾದರು.  27 ಸದಸ್ಯ ಬಲದ ತಾಲ್ಲೂಕು ಪಂಚಾಯಿತಿಯಲ್ಲಿ ಬಿಜೆಪಿಯ 18, ಕಾಂಗ್ರೆಸ್‌ನ 7 ಮಂದಿ ಹಾಗೂ ಜೆ.ಡಿ.ಎಸ್ 2 ಸದಸ್ಯ ಬಲ ಹೊಂದಿದೆ. ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನು ಅಭಿನಂದಿಸಿ ಸಮಾಜ ಕಲ್ಯಾಣ ಸಚಿವ ಎ.ನಾರಾಯಣಸ್ವಾಮಿ ಮಾತನಾಡಿ ಆನೇಕಲ್ ತಾಲ್ಲೂಕು ಪಂಚಾಯಿತಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಅವಿರೋಧ ಆಯ್ಕೆಗೆ ಸಹಕರಿಸಿದ  ಸದಸ್ಯರನ್ನು ಅಭಿನಂದಿಸಿದರು.ತಾಲ್ಲೂಕು ಪಂಚಾಯಿತಿಗಳು ನಿಷ್ಕ್ರಿಯವಾಗಿದ್ದವು. ಇವುಗಳಿಗೆ ಚೈತನ್ಯ ನೀಡುವ ಸಲುವಾಗಿ ಮುಖ್ಯಮಂತ್ರಿಗಳು ಪ್ರತಿ ತಾಲ್ಲೂಕು ಪಂಚಾಯಿತಿಗೆ 1 ಕೋಟಿ ಅನುದಾನ ನೀಡಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಸೂಚಿಸಿದ್ದಾರೆ.ತಾಲ್ಲೂಕಿಗೆ 5 ಕೋಟಿ ವಿಶೇಷ ಅನುದಾನವನ್ನು ತಂದು ಪ.ಜಾ ಮತ್ತು ಪ.ವರ್ಗದ ಕಾಲೋನಿಗಳಲ್ಲಿ ಸಿಮೆಂಟ್ ರಸ್ತೆ ನಿರ್ಮಿಸಲು ಕ್ರಮಕೈಗೊಳ್ಳಲಾಗುವುದು ಎಂದರು. ಕಿಯೋನಿಕ್ಸ್ ಅಧ್ಯಕ್ಷ ಎಂ.ಯಂಗಾರೆಡ್ಡಿ, ತಾಲ್ಲೂಕು ಬಿಜೆಪಿ ಅಧ್ಯಕ್ಷ ಎನ್.ಬಸವರಾಜು, ಮಾಜಿ ಅಧ್ಯಕ್ಷ ಕೆ.ಶಿವಪ್ಪ, ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಸೋಮಶೇಖರರೆಡ್ಡಿ ಮತ್ತಿತರರು ಹಾಜರಿದ್ದರು. 

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.