ಮಾನ್ವಿ: ತಾಲ್ಲೂಕಿನ ಜಾನೇಕಲ್ ಗ್ರಾಮ ಪಂಚಾಯಿತಿ ವತಿಯಿಂದ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಕೈಗೊಳ್ಳಲಾದ ಕಾಮಗಾರಿಗಳ ದೃಢೀಕರಣಕ್ಕೆ ಸಂಬಂಧಿಸಿದಂತೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಬಿ.ಬಿ.ಕುಲಕರ್ಣಿ ಹಾಗೂ ಚೀಕಲಪರ್ವಿ ಕ್ಷೇತ್ರದ ತಾಲ್ಲೂಕು ಪಂಚಾಯಿತಿ ಸದಸ್ಯ ಶಿವರಾಜ ಜಾನೇಕಲ್ ನಡುವೆ ಜಟಾಪಟಿ, ವಾಗ್ವಾದ ಶನಿವಾರ ನಡೆದಿದೆ.

ಜಾನೇಕಲ್ ಗ್ರಾಮ ಪಂಚಾಯಿತಿ ವತಿಯಿಂದ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಕೈಗೊಳ್ಳಲಾದ ಕಾಮಗಾರಿಗಳ ಕಡತಗಳೊಂದಿಗೆ ಆಗಮಿಸಿದ್ದ ಶಿವರಾಜ ಜಾನೇಕಲ್, ಕಾಮಗಾರಿಗಳ ದೃಢೀಕರಣಕ್ಕೆ ಒತ್ತಾಯಿಸಿದ್ದಾರೆ. ಅಧಿಕಾರಿ ಬಿ.ಬಿ.ಕುಲಕರ್ಣಿ ಗ್ರಾಮ ಪಂಚಾಯಿತಿ ಕಾಮಗಾರಿಗಳ ಬಗ್ಗೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ದಾಖಲೆಗಳನ್ನು ತಂದರೆ ಪರಿಶೀಲಿಸಬಹುದು. ಅನ್ಯ ವ್ಯಕ್ತಿಗಳು ತಂದರೆ ದೃಢೀಕರಿಸಲು ಸಾಧ್ಯವಿಲ್ಲ ಎಂದು ಸಹಿ ಹಾಕಲು ನಿರಾಕರಿಸಿದ್ದಾರೆ. ಇದರಿಂದ ಆಕ್ರೋಶಗೊಂಡ ಶಿವರಾಜ ಅಧಿಕಾರಿಯೊಂದಿಗೆ ವಾಗ್ವಾದಕ್ಕಿಳಿದಿದ್ದಾರೆ. ಇಬ್ಬರ ವಾಗ್ವಾದದ ನಡುವೆ ಕಚೇರಿಯ ಮೇಜಿನ ಮೇಲಿನ ಗಾಜು ಒಡೆದಿದೆ. ನಂತರ ರಕ್ಷಣೆಗಾಗಿ ಕಾರ್ಯನಿರ್ವಾಹಕ ಅಧಿಕಾರಿ ಬಿ.ಬಿ.ಕುಲಕರ್ಣಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದರು.

ಈ ಕುರಿತು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಕಾರ್ಯನಿರ್ವಾಹಕ ಅಧಿಕಾರಿ ಬಿ.ಬಿ.ಕುಲಕರ್ಣಿ, ಶನಿವಾರ ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ ನಡೆದ ಗಲಾಟೆ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸುವ ಕುರಿತು ಮೇಲಧಿಕಾರಿಗಳೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.