ಗುರುವಾರ , ಅಕ್ಟೋಬರ್ 17, 2019
27 °C

ತಾ.ಪಂ. ಕಚೇರಿಗೆ ಮುತ್ತಿಗೆ

Published:
Updated:

ಹಗರಿಬೊಮ್ಮನಹಳ್ಳಿ: ವಸತಿ ಯೋಜನೆಯ ಅಸಮರ್ಪಕ ಅನುಷ್ಠಾನ ವಿರೋಧಿಸಿ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಸೋಮವಾರ ತಾ.ಪಂ. ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಯಿತು.ಕ್ಷೇತ್ರ ವ್ಯಾಪ್ತಿಯ ವಸತಿ ಯೋಜನೆಯಲ್ಲಿ ಶಾಸಕರ ಅನಗತ್ಯ ಹಸ್ತಕ್ಷೇಪ ಸೇರಿದಂತೆ ಗ್ರಾ.ಪಂ. ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಅಧಿಕಾರ ಮೊಟಕು ಮತ್ತು ಮನೆಗಳ ನಿರ್ಮಾಣವನ್ನು ಕಪ್ಪು ಪಟ್ಟಿಯಲ್ಲಿರುವ ಭೂ ಸೇನಾ ನಿಗಮಕ್ಕೆ ವಹಿಸಿರುವುದನ್ನು ವಿರೋಧಿಸಲಾಯಿತು.ಕೇಂದ್ರದ ಅನುದಾನದ ಸಹಯೋಗದಲ್ಲಿ ರಾಜ್ಯ ಸರಕಾರ ಆರಂಭಿಸಿರುವ `ಬಸವ ಇಂದಿರಾ ಗ್ರಾಮೀಣ ವಸತಿ ಯೋಜನೆ~ ಅನುಷ್ಠಾನದಲ್ಲಿ ಕ್ಷೇತ್ರದ ಶಾಸಕ ನೇಮಿರಾಜ್ ನಾಯ್ಕ ಅವರು ಗ್ರಾಮ ಸಭೆಗಳ ಆಶಯಗಳನ್ನು ಗಾಳಿಗೆ ತೂರಿದ್ದಾರೆ ಎಂದು ಪ್ರತಿಭಟನೆಯ ನೇತೃತ್ವ ವಹಿಸಿದ್ದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುಟುಗನಹಳ್ಳಿ ಕೊಟ್ರೇಶ್ ಆರೋಪಿಸಿದರು.

ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಅಕ್ಕಿ ತೋಟೇಶ್, ಮುಖಂಡ ಹೆಗ್ಡಾಳು ರಾಮಣ್ಣ, ಕೆಪಿಸಿಸಿ ಸದಸ್ಯ ಎಸ್.ಕೃಷ್ಣ ನಾಯ್ಕ, ಜಿ.ಪಂ. ಸದಸ್ಯ ರೋಗಾಣಿ ಹುಲುಗಪ್ಪ, ಪ್ರಧಾನ ಕಾರ್ಯದರ್ಶಿ ಸಿ.ಬಸವರಾಜ್ ಮುಂತಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

 

Post Comments (+)