ಭಾನುವಾರ, ಜೂನ್ 20, 2021
20 °C

ತಾರತಮ್ಯಕ್ಕೆ ಕಡಿವಾಣ: ಶಿಕ್ಷಣ ಸಂಸ್ಥೆ ಕಾಯ್ದೆಗಳಿಗೆ ಶೀಘ್ರ ತಿದ್ದುಪಡಿ

ಪ್ರಕಾಶ್ ಕುಮಾರ್ / ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳಿಗೆ ಜಾತಿ, ಧರ್ಮ ಅಥವಾ ಲಿಂಗ ತಾರತಮ್ಯ ಮಾಡಿದರೆ ಅದು ಶಿಕ್ಷಾರ್ಹ ಅಪರಾಧ ಎನಿಸಿಕೊಳ್ಳುವ ದಿನಗಳು ದೂರವಿಲ್ಲ.ಅನೇಕ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳು ಇಂಥ ತಾರತಮ್ಯಕ್ಕೆ ಒಳಗಾದ ದೂರುಗಳು ಬಂದ ಹಿನ್ನೆಲೆಯಲ್ಲಿ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯವು, ತಾಂತ್ರಿಕ ಹಾಗೂ ವೈದ್ಯಕೀಯ ಶಿಕ್ಷಣ ಸಂಸ್ಥೆಗಳು ಮತ್ತು ವಿಶ್ವವಿದ್ಯಾಲಯಗಳಲ್ಲಿನ `ಕಾನೂನು ಬಾಹಿರ ಕ್ರಮ ತಡೆ ಮಸೂದೆ~ಗೆ ತಿದ್ದುಪಡಿ ತರಲು ಮುಂದಾಗಿದೆ.`2010ರ ಈ ಮಸೂದೆಯು ಜಾತಿ, ಧರ್ಮ ಅಥವಾ ಲಿಂಗ ತಾರತಮ್ಯವನ್ನು ಶಿಕ್ಷಾರ್ಹ ಅಪರಾಧ ಎಂದು ಪರಿಗಣಿಸುತ್ತದೆ. ಇಂಥ ಪ್ರಕರಣಗಳಲ್ಲಿ ತಪ್ಪಿತಸ್ಥರಿಗೆ ದಂಡ ವಿಧಿಸಲಾಗುತ್ತದೆ. ಆದರೆ ಶಿಕ್ಷೆಯ ಪ್ರಮಾಣವನ್ನು ಇನ್ನೂ ನಿರ್ಧರಿಸಿಲ್ಲ~ ಎಂದು ಸಚಿವಾಲಯದ ಮೂಲಗಳು `ಪ್ರಜಾವಾಣಿ~ಗೆ ತಿಳಿಸಿವೆ.ಶಿಕ್ಷಣ ಸಂಸ್ಥೆಗಳ ಇಂಥ ಕ್ರಮಗಳಿಗೆ ಲಗಾಮು ಹಾಕಲು ಸಚಿವಾಲಯವು ರಾಷ್ಟ್ರೀಯ ಮಾನ್ಯತಾ ನಿಯಂತ್ರಣ ಪ್ರಾಧಿಕಾರ ಮಸೂದೆಗೂ ತಿದ್ದುಪಡಿ ತರಲು ನಿರ್ಧರಿಸಿದೆ.ಉದ್ದೇಶಿತ ಕಾಯ್ದೆಯ ಅನ್ವಯ, ಶಿಕ್ಷಣ ಸಂಸ್ಥೆಗಳಿಗೆ ಮಾನ್ಯತೆ ನೀಡುವ ಮುನ್ನ `ಸಮಾನತೆ ಹಾಗೂ ಸಮಗ್ರತೆ ವಿಷಯ~ದಲ್ಲಿ ಅವುಗಳ ಧೋರಣೆಯನ್ನು ಪರಿಶೀಲಿಸುವ ಅಧಿಕಾರ ರಾಷ್ಟ್ರೀಯ ಪ್ರಾಧಿಕಾರಕ್ಕೆ ಇರುತ್ತದೆ ಎಂದು ಮೂಲಗಳು ಹೇಳಿವೆ.ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯದ ಕಾರಣದಿಂದ ಕೆಲವು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಸಚಿವಾಲಯವು ಈ ಎರಡೂ ಕಾಯ್ದೆಗಳಿಗೆ ತಿದ್ದುಪಡಿ ತರಲು ಮುಂದಾಗಿದೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.