ತಾರಾ, ಮಿರ್ಜಿಗೆ ಕಾಯಕ ಸೇವಾ ಧುರೀಣ ಪ್ರಶಸ್ತಿ

7

ತಾರಾ, ಮಿರ್ಜಿಗೆ ಕಾಯಕ ಸೇವಾ ಧುರೀಣ ಪ್ರಶಸ್ತಿ

Published:
Updated:

ಶ್ರೀರಂಗಪಟ್ಟಣ: ಚಿತ್ರನಟಿ ತಾರಾ ಹಾಗೂ ಬೆಂಗಳೂರು ನಗರ ಪೊಲೀಸ್ ಆಯುಕ್ತ ಜ್ಯೋತಿಪ್ರಕಾಶ್ ಮಿರ್ಜಿ ಸೇರಿದಂತೆ ಒಟ್ಟು 6 ಮಂದಿಯನ್ನು ಇಲ್ಲಿಗೆ ಸಮೀಪದ ಚಂದ್ರವನ ಆಶ್ರಮದ (ಬೇಬಿ ಮಠ) ವತಿಯಿಂದ ನೀಡುವ `ಕಾಯಕ ಸೇವಾ ಧುರೀಣ ಪ್ರಶಸ್ತಿ~ಗೆ ಆಯ್ಕೆ ಮಾಡಲಾಗಿದೆ ಎಂದು ನಿವೃತ್ತ ಕೆಎಎಸ್ ಅಧಿಕಾರಿ ಚಿಕ್ಕತಿಮ್ಮಯ್ಯ ತಿಳಿಸಿದರು.ಚಂದ್ರವನ ಆಶ್ರಮದಲ್ಲಿ ಸೋಮವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ರಾಜ್ಯ ಮಟ್ಟದ `ಕಾವೇರಿ ಪ್ರಶಸ್ತಿ~ಗೆ~ ಉದ್ಯಮಿ ವಿಜಯ ಸಂಕೇಶ್ವರ ಅವರನ್ನು ಆಯ್ಕೆ ಮಾಡಲಾಗಿದೆ. `ಕಾಯಕ ಸೇವಾ ಧುರೀಣ ಪ್ರಶಸ್ತಿ~ಗೆ ಮುಡುಕೊತೊರೆಯ ಮಹಾಲಿಂಗಸ್ವಾಮಿ, ಪತ್ರಕರ್ತ `ಈ ಟಿವಿಯ ಜಗದೀಶ್, ಗಾಯಕ ಕಿಕ್ಕೇರಿ ಕೃಷ್ಣಮೂರ್ತಿ, ಪ್ರಗತಿಪರ ರೈತರ ಪಾಲಹಳ್ಳಿ ಶ್ರೀನಿವಾಸ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು.ಮೌನವ್ರತ: ನವರಾತ್ರಿ ಅಂಗವಾಗಿ  ಚಂದ್ರವನ ಆಶ್ರಮದ ತ್ರಿನೇತ್ರ ಮಹಂತ ಶಿವಯೋಗಿ ಸ್ವಾಮೀಜಿ ಮಂಗಳವಾರದಿಂದ (ಅ.16) ದಶಮಿಯವರೆಗೆ ಮೌನ ವ್ರತ ಕೈಗೊಳ್ಳಲಿದ್ದಾರೆ.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry