ತಾಲ್ಲೂಕು ಪಂಚಾಯಿತಿ ಕೆಡಿಪಿ ಸಭೆ: ಮಾಹಿತಿ ನೀಡಲು ಸೂಚನೆ

ಶನಿವಾರ, ಮೇ 25, 2019
22 °C

ತಾಲ್ಲೂಕು ಪಂಚಾಯಿತಿ ಕೆಡಿಪಿ ಸಭೆ: ಮಾಹಿತಿ ನೀಡಲು ಸೂಚನೆ

Published:
Updated:

ಚಿಕ್ಕಬಳ್ಳಾಪುರ: `ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಯಾವುದೇ ಯೋಜನೆಯಾಗಿದ್ದರೂ ಅದರ ಕುರಿತು ಜನರಿಗೆ ಮಾಹಿತಿ ಒದಗಿಸುವುದು ಸರ್ಕಾರಿ ಅಧಿಕಾರಿಗಳ ಕರ್ತವ್ಯ~  ಎಂದು ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷ ವೆಂಕಟನಾರಾಯಣಪ್ಪ ಸೂಚಿಸಿದರು. ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ತಾಲ್ಲೂಕು ಪಂಚಾಯಿತಿ ಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, `ಸರ್ಕಾರಿ ಯೋಜನೆಗಳು ಜನರಿಗೆ ದೊರೆಯಬೇಕೆ ಹೊರತು ವ್ಯರ್ಥವಾಗಬಾರದು~ ಎಂದರು. `ಯೋಜನೆಗಳ ಬಗ್ಗೆ ಮಾಹಿತಿ ದೊರೆಯದ ಕಾರಣ ಜನಸಾಮಾನ್ಯರಿಗೆ ತಲುಪುತ್ತಿಲ್ಲ. ಆಯಾ ಯೋಜನೆಗಳ ಫಲಾನುಭವಿಗಳಿದ್ದರೂ ಅವರಿಗೆ ಯೋಜನೆಯ ಸೌಲಭ್ಯಗಳು ದೊರೆಯುತ್ತಿಲ್ಲ ಎಂದು ಖಾರವಾಗಿ ತಿಳಿಸಿದರು. ವಿವಿಧ ಇಲಾಖೆಗಳ ಪ್ರಗತಿ ಕಾರ್ಯಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು, `ಸುವರ್ಣಭೂಮಿ ಯೋಜನೆ ಸೇರಿದಂತೆ ಸರ್ಕಾರದ ಇತರ ಯೋಜನೆಗಳು ರೈತರಿಗೆ ತುಂಬ ಉಪಯುಕ್ತವಾಗಲಿದ್ದು, ತೋಟಗಾರಿಕೆ, ಕೃಷಿ ಮತ್ತು ರೇಷ್ಮೆ ಇಲಾಖೆಯ ಅಧಿಕಾರಿಗಳು ಅಗತ್ಯ ಮಾಹಿತಿ ನೀಡಬೇಕು. ಸೌಕರ್ಯ ಕಲ್ಪಿಸಬೇಕು~ ಎಂದರು.  ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಮಂಜುಳಾ, ಕಾರ್ಯನಿರ್ವಹಣಾಧಿಕಾರಿ ಡಾ. ರಾಮಚಂದ್ರರೆಡ್ಡಿ ಮತ್ತು ಸದಸ್ಯ ಕೃಷ್ಣಮೂರ್ತಿ ಸಭೆಯಲ್ಲಿ ಉಪ ಸ್ಥಿತರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry