ಭಾನುವಾರ, ಏಪ್ರಿಲ್ 18, 2021
31 °C

ತಾವು ಬಿಎಸ್‌ವೈ ಆಯ್ಕೆ: ಪುಟ್ಟಸ್ವಾಮಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ತಾವು ಹಿಂದುಳಿದ ವರ್ಗಗಳ ಮುಖಂಡರಾದ ಕಾರಣದಿಂದ ಮುಂದಿನ ವಿಧಾನಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ತಮಗೆ ಸಚಿವ ಸ್ಥಾನ ನೀಡಲಾಗಿದೆ. ಬಿ.ಎಸ್.ಯಡಿಯೂರಪ್ಪ ಅವರೇ ತಮ್ಮನ್ನು ಸಚಿವ ಸ್ಥಾನಕ್ಕೆ ಆಯ್ಕೆ ಮಾಡಿರುವುದು ಎಂದು ಸಚಿವ ಬಿ.ಜೆ.ಪುಟ್ಟಸ್ವಾಮಿ ಹೇಳಿದರು.ಪುಟ್ಟಸ್ವಾಮಿ ಅವರಿಗೆ ಸಚಿವ ಸ್ಥಾನ ನೀಡಿರುವ ಕಾರಣಕ್ಕಾಗಿ ಯಡಿಯೂರಪ್ಪ ವಿರುದ್ಧ ಅವರ ಕೆಲವು ಬೆಂಬಲಿಗ ಶಾಸಕರೇ ಅಸಮಾಧಾನ ಹೊರಹಾಕಿದ್ದಾರೆ. ಈ ಕುರಿತು `ಪ್ರಜಾವಾಣಿ~ಗೆ ಪ್ರತಿಕ್ರಿಯೆ ನೀಡಿದ ಅವರು, `ರಾಜ್ಯದಲ್ಲಿ ಗಾಣಿಗ ಸಮುದಾಯದ (ಪುಟ್ಟಸ್ವಾಮಿ ಗಾಣಿಗ ಸಮುದಾಯಕ್ಕೆ ಸೇರಿದವರು) ಹತ್ತು ಲಕ್ಷ ಜನರಿದ್ದಾರೆ. ಹಿಂದುಳಿದ ವರ್ಗಗಳ ಬೆಂಬಲವಿಲ್ಲದೇ ಮುಂದಿನ ಚುನಾವಣೆಯಲ್ಲಿ ಗೆಲುವು ಸಾಧಿಸಲು ಸಾಧ್ಯವಿಲ್ಲ ಎಂದು ಯಡಿಯೂರಪ್ಪ ಅರಿತಿದ್ದಾರೆ. ನಾನು 40 ವರ್ಷಗಳಿಂದ ಸಾರ್ವಜನಿಕ ಜೀವನದಲ್ಲಿದ್ದೇನೆ. ಗಾಣಿಗ ಸಮುದಾಯದ ಪ್ರಮುಖ ಮುಖಂಡನೂ ಹೌದು. ನನಗೆ ಪ್ರಾತಿನಿಧ್ಯ ನೀಡಿದರೆ ಮುಂದಿನ ಚುನಾವಣೆಯಲ್ಲಿ ಅನುಕೂಲ ಆಗಬಹುದು ಎಂದು ಯಡಿಯೂರಪ್ಪ ಅವರಿಗೆ ಗೊತ್ತು. ಅದಕ್ಕಾಗಿಯೇ ಸಚಿವ ಸ್ಥಾನ ನೀಡಿದ್ದಾರೆ~ ಎಂದರು.ತಮಗೆ ಸ್ಥಾನ ನೀಡಿದ ಕಾರಣಕ್ಕೆ ಹಲವು ಸಚಿವರು ಸಿಟ್ಟಿಗೆದ್ದಿದ್ದು, ಯಡಿಯೂರಪ್ಪ ಅವರಿಂದ ದೂರ ಉಳಿಯಲು ನಿರ್ಧರಿಸಿದ್ದಾರೆ ಎಂಬುದನ್ನು ಗಮನಕ್ಕೆ ತಂದಾಗ, `ನಾನು ಈ ಸಂದರ್ಭದಲ್ಲಿ ರಾಜೀನಾಮೆಯ ಯೋಚನೆಯನ್ನೇ ಮಾಡಿಲ್ಲ. ಯಡಿಯೂರಪ್ಪ ಅವರು ಹೇಳಿದರೆ ಮಾತ್ರವೇ ರಾಜೀನಾಮೆ ನೀಡುತ್ತೇನೆ~ ಎಂದರು.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.