ಭಾನುವಾರ, ಮೇ 16, 2021
23 °C

ತಿಂಗಳಾಂತ್ಯದಲ್ಲಿ ವಕ್ಫ್ ಆಸ್ತಿ ಬಚಾವೋ ಆಂದೋಲನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: `ವಕ್ಫ್ ಆಸ್ತಿ ಬಚಾವೋ~ ಆಂದೋಲನವನ್ನು ಈ ತಿಂಗಳ ಅಂತ್ಯದೊಳಗೆ ಬೀದರ್‌ನಿಂದ ಬೆಂಗ ಳೂರು ವರೆಗೆ ಕೈಗೊಳ್ಳಲು ಅಲ್ಪ ಸಂಖ್ಯಾತ ಮೋರ್ಚಾವು ಮುಂದಾಗಿದೆ.



ಅಲ್ಪಸಂಖ್ಯಾತ ಮೋರ್ಚಾ ರಾಜ್ಯ ಅಧ್ಯಕ್ಷ ಡಾ.ನಿಜಾಮುದ್ದೀನ್ ಎಫ್. ಮೌಸೀನ್ ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ಮಾತನಾಡಿ, `ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅನ್ವರ್ ಮಾನಿಪ್ಪಾಡಿ ನೀಡಿರುವ ವರದಿ ಅನ್ವಯ ರಾಜ್ಯ ವಕ್ಫ್  ಮಂಡಳಿಯ 2 ಲಕ್ಷ ಕೋಟಿಗಳ ಆಸ್ತಿ ಕಬಳಿಕೆಯ ಪ್ರಕರಣವನ್ನು ಸಿಒಡಿ ತನಿಖೆಗೆ ಒಪ್ಪಿಸಬೇಕು~ ಎಂದು ಒತ್ತಾಯಿಸಿದರು.



`ಈ ಕೂಡಲೇ ಮುಖ್ಯಮಂತ್ರಿ ಅವರು ಪ್ರಕರಣವನ್ನು ಸದನದಲ್ಲಿ ಚರ್ಚಿಸಲು ಅವಕಾಶ ನೀಡಿ ತಪ್ಪಿತಸ್ಥರ ವಿರುದ್ಧ ಉಗ್ರ ಕ್ರಮ ಕೈಗೊಳ್ಳಬೇಕು~ ಎಂದು ಆಗ್ರಹಿಸಿದರು.`ಜನರಿಗೆ ವಕ್ಫ್  ಮಂಡಳಿಯಲ್ಲಿ ನಡೆದಿರುವ ಅಕ್ರಮಗಳನ್ನು ತಿಳಿಸಲು ಆಂದೋಲನ ನಡೆಸಿ, ಜನರಲ್ಲಿ ಜಾಗೃತಿ ಮೂಡಿಸಲಾಗುವುದು~ ಎಂದು ಹೇಳಿದರು.



`ವಕ್ಫ್ ಮಂಡಳಿ ಆದಾಯ ಅಲ್ಪಸಂಖ್ಯಾತರ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಅಭಿವೃದ್ಧಿಗೆ ಉಪಯೋಗವಾಗಬೇಕಿತ್ತು. ಕೇಂದ್ರ ಮತ್ತು ರಾಜ್ಯ ಸಚಿವರು, ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳು ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ~ ಎಂದು ಅವರು ಆರೋಪಿಸಿದರು.



`ವಕ್ಫ್ ಆಸ್ತಿ ಕಬಳಿಕೆ ಹಿನ್ನೆಲೆಯಲ್ಲಿ ಎಲ್ಲ ಪಕ್ಷಗಳ ಬಣ್ಣ ಬಯಲಾಗಿದೆ. ಬಡ ಮುಸಲ್ಮಾನರಿಗೆ ಮತ್ತು ಅಲ್ಪಸಂಖ್ಯಾತ ಸಮುದಾಯಕ್ಕೆ ದ್ರೋಹ ಮಾಡಲಾಗಿದೆ. ಇದನ್ನು ಬೃಹತ್ ಮಟ್ಟದಲ್ಲಿ ಪ್ರತಿಭಟಿಸಲಾಗುವುದು~ ಎಂದು ಹೇಳಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.