ತಿಂಗಳಿಗೊಮ್ಮೆ ಸೇವಾ ಮೇಳ ಅಗತ್ಯ

7

ತಿಂಗಳಿಗೊಮ್ಮೆ ಸೇವಾ ಮೇಳ ಅಗತ್ಯ

Published:
Updated:

ಕೆಂಗೇರಿ: `ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ನೀಡುವ ಸೇವಾ ಮೇಳಗಳು ತಿಂಗಳಿಗೊಮ್ಮೆ ನಡೆಯಬೇಕು. ಆಗ ಬಡವರಿಗೆ ಸವಲತ್ತುಗಳನ್ನು ಮನೆಯ ಬಾಗಿಲಿಗೆ ತಲುಪಿಸಲು ಸಾಧ್ಯವಾಗುತ್ತದೆ~ ಎಂದು ಶಾಸಕ ಪ್ರಿಯಕೃಷ್ಣ ಅಭಿಪ್ರಾಯಪಟ್ಟರು.ಗೋವಿಂದರಾಜನಗರ ವಿಧಾನಸಭಾ ಯುವ ಕಾಂಗ್ರೆಸ್ ಸಮಿತಿ ಆಶ್ರಯದಲ್ಲಿ ನಗರದ ಪಟ್ಟೇಗಾರಪಾಳ್ಯದಲ್ಲಿ ಈಚೆಗೆ ಆಯೋಜಿಸಿದ್ದ `ಸೇವಾ ಮೇಳ~ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.`ಸರ್ಕಾರದ ಸವಲತ್ತುಗಳ ಬಗ್ಗೆ ಮಾಹಿತಿ ಇಲ್ಲದವರಿಗೆ ಈ ಮೇಳಗಳು ಸಹಕಾರಿಯಾಗಲಿದೆ. ಜನರು ಹೆಚ್ಚಿನ ಸಂಖ್ಯೆಯಲ್ಲಿ ಮೇಳದಲ್ಲಿ ಭಾಗವಹಿಸಬೇಕು~ ಎಂದು ಅವರು ಮನವಿ ಮಾಡಿದರು.ಮಾಜಿ ಉಪಮೇಯರ್ ಪುಟ್ಟರಾಜು, ಪಾಲಿಕೆ ಮಾಜಿ ಸದಸ್ಯ ಕೃಷ್ಣಪ್ಪ, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ. ಮಂಜುನಾಥ್ ಈ ಸಂದರ್ಭದಲ್ಲಿಹಾಜರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry