ತಿದ್ದುಪಡಿಗೆ ಆಗ್ರಹ

7

ತಿದ್ದುಪಡಿಗೆ ಆಗ್ರಹ

Published:
Updated:

ಬೆಂಗಳೂರು: `ಹೈದರಾಬಾದ್ ಕರ್ನಾಟಕಕ್ಕೆ ಮೂಲಸೌಕರ್ಯಕ್ಕಾಗಿ ಸಂವಿಧಾನದ 371 ನೇ ಕಲಂ ತ್ದ್ದಿದುಪಡಿಗೆ ಆಗ್ರಹಿಸಿ ಕಳೆದ 15 ವರ್ಷಗಳಿಂದ  ಸಮಿತಿ ಹೋರಾಟ ನಡೆಸುತ್ತಾ ಬಂದರೂ ಕೇಂದ್ರ ಸರ್ಕಾರ ಇದುವರೆಗೂ ಕ್ರಮ ಕೈಗೊಳ್ಳದೇ ದೊಡ್ಡ ಅನ್ಯಾಯ ಮಾಡಿದೆ~ ಎಂದು ಹೈದರಾಬಾದ್ ಕರ್ನಾಟಕ ಹೋರಾಟ ಸಮಿತಿ ಅಧ್ಯಕ್ಷ ವೈಜನಾಥ ಪಾಟೀಲ್ ಹೇಳಿದರು.ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ,`ಅಭಿವೃದ್ಧಿಯನ್ನು ಕಡೆಗಣಿಸುವ ಜೊತೆಯಲ್ಲಿ ವೃತ್ತಿಪರ ಶಿಕ್ಷಣ ಹಾಗೂ ಸರ್ಕಾರಿ ಉದ್ಯೋಗ ನೀಡುವುದರಲ್ಲಿ  ಹೈದರಾಬಾದ್ ಕರ್ನಾಟಕ ಭಾಗದ ಜಿಲ್ಲೆಗಳಿಗೆ ದೊಡ್ಡ ಅನ್ಯಾಯ ಮಾಡಲಾಗಿದೆ.

 

ಸಿಇಟಿಯಲ್ಲಿಯೂ ಈ ಭಾಗದ  ವಿದ್ಯಾರ್ಥಿಗಳನ್ನು ನಿರ್ಲಕ್ಷಿಸಲಾಗುತ್ತಿದೆ.  ಕೂಡಲೇ ರಾಜ್ಯದ ಜನಪ್ರತಿನಿಧಿಗಳು ಕೇಂದ್ರದ ಮೇಲೆ ಒತ್ತಡ ತರಬೇಕು~ ಎಂದು ಆಗ್ರಹಿಸಿದರು.  

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry