ತಿರುಓಣಂಗೆ ವಿಶೇಷ ಬಸ್ಸು

ಬುಧವಾರ, ಮೇ 22, 2019
29 °C

ತಿರುಓಣಂಗೆ ವಿಶೇಷ ಬಸ್ಸು

Published:
Updated:

ಬೆಂಗಳೂರು: ತಿರುಓಣಂ ಹಬ್ಬದ ಪ್ರಯುಕ್ತ ರಾಜ್ಯ ರಸ್ತೆ ಸಾರಿಗೆ ನಿಗಮವು ಬೆಂಗಳೂರಿನಿಂದ ಕೇರಳದ ವಿವಿಧ ಪ್ರದೇಶಗಳಿಗೆ ಇದೇ 8ರವರೆಗೆ ವಿಶೇಷ ಬಸ್ಸುಗಳ ವ್ಯವಸ್ಥೆ ಮಾಡಿದೆ.ಕೋಯಿಕ್ಕೋಡ್, ಎರ್ನಾಕುಳಂ, ಪಾಲಕ್ಕಾಡ್, ಕೊಟ್ಟಾಯಂ, ತ್ರಿಶೂರ್ ಮತ್ತು ತಿರುವನಂತಪುರಕ್ಕೆ ನಗರದ ಮೈಸೂರು ರಸ್ತೆಯಲ್ಲಿರುವ ಸ್ಯಾಟಲೈಟ್ ಬಸ್ ನಿಲ್ದಾಣ ಹಾಗೂ ಶಾಂತಿನಗರ ಬಸ್ ನಿಲ್ದಾಣಗಳಿಂದ ವಿಶೇಷ ಬಸ್ಸುಗಳು ತೆರಳಲಿವೆ ಎಂದು ನಿಗಮದ ಪ್ರಕಟಣೆ ತಿಳಿಸಿದೆ.ಈ ಸ್ಥಳಗಳಿಂದ ಬೆಂಗಳೂರಿಗೆ ವಾಪಸಾಗುವವರ ಅನುಕೂಲಕ್ಕಾಗಿ ಇದೇ 11ರಂದು ವಿಶೇಷ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ. ವಿಶೇಷ ಬಸ್ಸುಗಳಿಗೆ ಮುಂಗಡ ಟಿಕೆಟ್ ಕಾಯ್ದಿರಿಸಲು  ನಿಗಮದ ವೆಬ್‌ಸೈಟ್ (www.­ksrtc.in)) ಮೂಲಕ ಹಾಗೂ 56767 ಸಂಖ್ಯೆಗೆ ಕಿರು ಸಂದೇಶ ಕಳುಹಿಸಬೇಕು.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry