ಸೋಮವಾರ, ಏಪ್ರಿಲ್ 12, 2021
25 °C

ತೀವ್ರ ಹೋರಾಟ ಅಗತ್ಯ: ಶಿವರಾಮಗೌಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೊಪ್ಪಳ: ಸಂವಿಧಾನದ 371ನೇ ವಿಧಿಗೆ ತಿದ್ದುಪಡಿ ತರುವ ಮೂಲಕ ಹೈದರಾಬಾದ್ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ಸಿಗುವಂತಾಗಲು ತೀವ್ರ ಹೋರಾಟ ನಡೆಸಬೇಕಾದ ಅಗತ್ಯವಿದೆ ಎಂದು ಸಂಸದ ಶಿವರಾಮಗೌಡ ಅಭಿಪ್ರಾಯಪಟ್ಟರು.ಕನ್ನಡನೆಟ್.ಕಾಂ ಹಾಗೂ ಕವಿಸಮೂಹದ ಸಂಯುಕ್ತ ಆಶ್ರಯದಲ್ಲಿ ನಗರದಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ 49ನೇ ಕವಿಸಮಯದಲ್ಲಿ ವಿಶೇಷ ಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು.ಹೈದರಾಬಾದ್ ಕರ್ನಾಟಕ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡಲು ಕೇಂದ್ರ ಗೃಹ ಸಚಿವರು ಆಸಕ್ತಿ ತೋರಿಸುತ್ತಿಲ್ಲ. ವಿಶೇಷ ಸ್ಥಾನಮಾನ ಕೇಳುತ್ತಿರುವವರು, ತೆಲಂಗಾಣದಂತೆ ಮುಂದೊಂದು ದಿನ ಪ್ರತ್ಯೇಕ ರಾಜ್ಯ ಕೇಳಬಹುದು ಎಂಬ ಅನುಮಾನ ಅವರನ್ನು ಕಾಡುತ್ತಿದೆ. ಆದರೆ, 371ನೇ ವಿಧಿಗೆ ತಿದ್ದುಪಡಿ ತಂದು ವಿಶೇಷ ಸ್ಥಾನಮಾನ ನೀಡುವ ಅಗತ್ಯತೆಯನ್ನು ಸರ್ವ ಪಕ್ಷಗಳ ನಿಯೋಗವು ಪ್ರಧಾನ ಮಂತ್ರಿಯವರಿಗೆ ಮನವರಿಕೆ ಮಾಡಲು ಪ್ರಯತ್ನಿಸಿದೆ ಎಂದೂ ಅವರು ಹೇಳಿದರು.ಇದೇ ತಿಂಗಳಲ್ಲಿ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿದೆ. ಜಾಥಾ ಸೇರಿದಂತೆ ಈ ಉದ್ದೇಶ ಈಡೇರಿಕೆಗಾಗಿ ನಡೆಯುವ ಹೋರಾಟದಲ್ಲಿ ಪಾಲ್ಗೊಳ್ಳಲು ಎಲ್ಲರೂ ಸಿದ್ಧರಾಗಬೇಕು ಎಂದೂ ಅವರು ಮನವಿ ಮಾಡಿದರು.ಕವಿಸಮಯ ಕಾರ್ಯಕ್ರಮ ಕುರಿತು ಸಂತಸ ವ್ಯಕ್ತಪಡಿಸಿದರಲ್ಲದೆ, ಸಮಾನತೆ ಕುರಿತ ಕವನವೊಂದನ್ನು ಓದುವುದರ ಮೂಲಕ ಅವರು ಕವಿಗೋಷ್ಠಿಗೆ ಚಾಲನೆ ನೀಡಿದರು.

ಡಾ.ಮಹಾಂತೇಶ ಮಲ್ಲನಗೌಡ, ಅಲ್ಲಮಪ್ರಭು ಬೆಟ್ಟದೂರು, ಸುಮತಿ ಹಿರೇಮಠ, ಬಸವರಾಜ ಶೀಲವಂತರ, ಮಹಾಂತೇಶ ಕೊತಬಾಳ, ಶಿವಾನಂದ ಹೊದ್ಲೂರ, ಡಾ.ರೇಣುಕಾ ಕರಿಗಾರ, ಗಾಯತ್ರಿ ಭಾವಿಕಟ್ಟಿ ಮತ್ತಿತರರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.ಕವಿಗೋಷ್ಠಿಯ ನಂತರ ‘ಕ್ರಾಂತಿ ಸೂರ್ಯನ ಕಂದೀಲು’ ಕವನ ಸಂಕಲನದ ವಿಮರ್ಶೆ ಮತ್ತು ಸಂವಾದ ನಡೆಯಿತು. ಮಹೇಶ ಬಳ್ಳಾರಿ ಸ್ವಾಗತಿಸಿದರು. ಸಿರಾಜ್ ಬಿಸರಳ್ಳಿ ಕಾರ್ಯಕ್ರಮ ನಿರೂಪಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.