ತುಂಗಭದ್ರಾ ಜಲಾಶಯಕ್ಕೆ ಒಂದೇ ದಿನ 10 ಟಿಎಂಸಿ ನೀರು

ಶುಕ್ರವಾರ, ಜೂಲೈ 19, 2019
28 °C

ತುಂಗಭದ್ರಾ ಜಲಾಶಯಕ್ಕೆ ಒಂದೇ ದಿನ 10 ಟಿಎಂಸಿ ನೀರು

Published:
Updated:

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಶನಿವಾರ ತುಂಬ ಕ್ಷೀಣಿಸಿದೆ. ಆದರೆ ತುಂಗಭದ್ರಾ ಜಲಾನಯನ ಪ್ರದೇಶದಲ್ಲಿ  ಮೂರು ನಾಲ್ಕು ದಿನಗಳಿಂದ ಸುರಿದ ಸತತ ಮಳೆಯಿಂದಾಗಿ ಹೊಸಪೇಟೆ ಬಳಿಯ ತುಂಗಭದ್ರಾ ಜಲಾಶಯಕ್ಕೆ ಅಗಾಧ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, ಕೇವಲ 24 ಗಂಟೆಗಳಲ್ಲಿ ಸುಮಾರು 10 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ.ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಶುಕ್ರವಾರ 36 ಸಾವಿರ ಕ್ಯೂಸೆಕ್ ಇದ್ದುದು ಈಗ 1,07,171 ಕ್ಯೂಸೆಕ್‌ಗೆ ತಲುಪಿದೆ.

ಉತ್ತರ ಕರ್ನಾಟಕ ಭಾಗದಲ್ಲಿ ಮಳೆ ಕ್ಷೀಣಿಸಿದ್ದು ಬೆಳಗಾವಿ, ಹಾವೇರಿ, ಉ.ಕ. ಜಿಲ್ಲೆಗಳಲ್ಲಿ ತುಂತುರು ಮಳೆಯಾಗಿದೆ.ಮಹಾರಾಷ್ಟ್ರದ ಕೊಂಕಣ ಪ್ರದೇಶದಲ್ಲಿ ಮಳೆ ಕಡಿಮೆಯಾಗಿದೆ. ಚಿಕ್ಕೋಡಿ ತಾಲ್ಲೂಕಿನಲ್ಲಿ ಕೃಷ್ಣಾ ಮತ್ತು ಉಪನದಿಗಳ ಪ್ರವಾಹ ಇಳಿಮುಖವಾಗಿದೆ. ಪ್ರವಾಹದಲ್ಲಿ ಮುಳುಗಡೆಯಾಗಿದ್ದ ಕಲ್ಲೋಳ-ಯಡೂರ ಸೇತುವೆ ಸಂಚಾರಕ್ಕೆ ತೆರೆದುಕೊಂಡಿದೆ.ಮಹಾರಾಷ್ಟ್ರದ ರಾಜಾಪುರ ಬ್ಯಾರೇಜಿನ ಒಳಹರಿವು 66,998 ಕ್ಯೂಸೆಕ್ ಇತ್ತು. ಉಪನದಿಗಳಾದ ದೂದಗಂಗಾ ಮತ್ತು ವೇದಗಂಗಾ ನದಿಗಳಲ್ಲಿ ಪ್ರವಾಹ ಇಳಿಮುಖವಾಗಿದೆ. ಕಳೆದೆರೆಡು ದಿನಗಳಿಂದ ಜಲಾವೃತಗೊಂಡಿದ್ದ ಜತ್ರಾಟ- ಭೀವಶಿ ಸೇತುವೆ ಸಂಚಾರಕ್ಕೆ ಮುಕ್ತಗೊಂಡಿದೆ.ಕೊಡಗು ಜಿಲ್ಲೆಯಲ್ಲಿ ಮುಂಗಾರಿನ ರಭಸ ತಗ್ಗಿದ್ದು, ಅಲ್ಲಲ್ಲಿ ಸಾಧಾರಣ ಮಳೆಯಾಗಿದೆ. ತಲಕಾವೇರಿಯಲ್ಲೂ ಮಳೆ ಕಡಿಮೆಯಾಗಿದೆ. ಭಾಗಮಂಡಲದಲ್ಲಿ ಪ್ರವಾಹ ತಗ್ಗಿದ್ದು, ರಸ್ತೆಗಳು ವಾಹನಗಳ ಸಂಚಾರಕ್ಕೆ ಮುಕ್ತವಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry