ತುಂಗಭದ್ರಾ ಜಲಾಶಯಕ್ಕೆ ಬಿಗಿಭದ್ರತೆ

ಬುಧವಾರ, ಮೇ 22, 2019
24 °C

ತುಂಗಭದ್ರಾ ಜಲಾಶಯಕ್ಕೆ ಬಿಗಿಭದ್ರತೆ

Published:
Updated:

ಹೊಸಪೇಟೆ: ದೆಹಲಿಯ ಹೈಕೋರ್ಟ್ ಮುಂದೆ ನಡೆದ ಬಾಂಬ್ ದಾಳಿಯ ಹಿನ್ನೆಲೆಯಲ್ಲಿ ಐತಿಹಾಸಿಕ ಹಂಪಿ ಸೇರಿದಂತೆ ತುಂಗಭದ್ರಾ ಜಲಾಶಯಕ್ಕೂ ಹೆಚ್ಚಿನ ಭದ್ರತೆಯನ್ನು ಒದಗಿಸಲಾಗಿದೆ.ದೇಶ-ವಿದೇಶಗಳಿಂದ ಬರುವ ಪ್ರವಾಸಿಗರಲ್ಲಿ ಅಭದ್ರತೆಯನ್ನು ಸೃಷ್ಟಿಸುವ ಸಂಚು ರೂಪಿಸಿದ್ದಾರೆ ಎಂಬ ವದಂತಿಗಳ ಹಿನ್ನೆಲೆಯಲ್ಲಿ ಪ್ರವಾಸಿ ತಾಣಗಳನ್ನು ಉಗ್ರರು ಪ್ರಮುಖ ಗುರಿ ಯಾಗಿಸಿದ್ದಾರೆ ಎಂಬ ಮಾಹಿತಿಯಂತೆ ದೆಹಲಿಯ ಹೈಕೋರ್ಟ್ ಬಳಿ ಬಾಂಬ್ ಸ್ಫೋಟ ನಡೆಯುತ್ತಿದ್ದಂತೆ ಇಂತಹ ಸ್ಥಳಗಳನ್ನು ರಕ್ಷಿಸಲು ಮುಂದಾಗಿದ್ದು ಐತಿಹಾಸಿಕ ಪ್ರವಾಸಿ ತಾಣ ಹಂಪಿ ಹಾಗೂ ಕರ್ನಾಟಕ ಮತ್ತು ಆಂಧ್ರ ಪ್ರದೇಶದ ಕೆಲ ಜಿಲ್ಲೆಗಳ ಜೀವನಾಡಿ ತುಂಗಭದ್ರಾ ಜಲಾಶಯಕ್ಕೆ ವ್ಯಾಪಕ ಭದ್ರತೆಯನ್ನು ಒದಗಿಸಲು ಪೊಲೀಸ್ ಇಲಾಖೆ ಮುಂದಾಗಿದೆ.ಹಂಪಿಯ ವಿರೂಪಾಕ್ಷೇಶ್ವರ ದೇವಾಲಯ, ಎದುರು ಬಸವಣ್ಣ ಬಳಿಯ ಸಾಲು ಮಂಟಪ. ಕಮಲ್‌ಮಹಲ್, ಆನೆ ಮತ್ತು ಒಂಟೆಗಳ ಲಾಯ, ಮಹಾನವಮಿ ದಿಬ್ಬ, ರಾಣಿಯರ ಸ್ನಾನ ಗೃಹ  ಸೇರಿದಂತೆ ಮಹತ್ವದ ಸ್ಮಾರಕಗಳ ಸ್ಥಳಗಳಲ್ಲಿ ಶ್ವಾನದಳದಿಂದ ಪರಿಶೀಲನೆ ಮತ್ತು ಹೆಚ್ಚಿನ ಸಿಬ್ಬಂದಿ ನಿಯೋಜನೆಯೊಂದಿಗೆ ಬಂದೋಬಸ್ತ್ ನೀಡಿದೆ.

ಅಂತೆಯೇ ತುಂಗಭದ್ರಾ ಜಲಾಶಯದ ಎಲ್ಲೆಡೆ ಹೆಚ್ಚಿನ ಸಿಬ್ಬಂದಿ ಮತ್ತು ಜಲಾಶಯದ ಪ್ರವೇಶ ದ್ವಾರದಲ್ಲಿ ಖಾಸಗಿ ಸಿಬ್ಬಂದಿಗಳೊಂದಿಗೆ ವಾಹನ ತಪಾಸಣೆ ಮಾಡುವ ಮೂಲಕ ಹೆಚ್ಚಿನ ರಕ್ಷಣೆಗೆ ಮುಂದಾಗಿದೆ.

ಮತ್ತೊಂದೆಡೆ ನಗರದ ರೈಲ್ವೆ ನಿಲ್ದಾಣ, ಬಸ್ ನಿಲ್ದಾಣ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಸಂಚಾರಿ ದಳ ತೀವ್ರ ನಿಗಾ ವಹಿಸುವಂತೆ ಮಾಡಲಾಗಿದೆ. 

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry