ತುಂಡಾದ ವಿದ್ಯುತ್ ತಂತಿ: 9 ದ್ವಿಚಕ್ರ ವಾಹನಕ್ಕೆ ಬೆಂಕಿ

7

ತುಂಡಾದ ವಿದ್ಯುತ್ ತಂತಿ: 9 ದ್ವಿಚಕ್ರ ವಾಹನಕ್ಕೆ ಬೆಂಕಿ

Published:
Updated:

ಆನೇಕಲ್: ತಾಲ್ಲೂಕಿನ ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದ ಸಿಂಟೆಕ್ಸ್ ಕಾರ್ಖಾನೆ ಮುಂಭಾಗದ ರಸ್ತೆಯಲ್ಲಿ ಹಾದುಹೋಗಿರುವ 11 ಕೆ.ವಿ ಸಾಮರ್ಥ್ಯದ ವಿದ್ಯುತ್ ತಂತಿಯೊಂದು ನಿಲ್ಲಿಸಿದ್ದ ದ್ವಿಚಕ್ರ ವಾಹನಗಳ ಮೇಲೆ ತುಂಡಾಗಿ ಬಿದ್ದ ಪರಿಣಾಮ 9 ದ್ವಿಚಕ್ರ ವಾಹನಗಳು ಸುಟ್ಟು ಹೋಗಿರುವ ಘಟನೆ ಸೋಮವಾರ ನಡೆದಿದೆ.ಹಲವು ದಿನಗಳಿಂದ ಈ ತಂತಿಯಲ್ಲಿ ಬೆಂಕಿಯ ಕಿಡಿ ಕಾಣಿಸಿಕೊಳ್ಳುತ್ತಿದ್ದವು ಎನ್ನಲಾಗಿದೆ. ವಿದ್ಯುತ್ ತಂತಿ ಕಡಿದು ಬಿದ್ದುದರಿಂದ ವಾಹನಗಳಲ್ಲಿನ ಪೆಟ್ರೋಲ್ ಸಂಪರ್ಕದಿಂದಾಗಿ ಬೆಂಕಿ ಹೊತ್ತಿಕೊಂಡು ವಾಹನಗಳು ಸುಟ್ಟು ಹೋಗಿವೆ.ಹೆಬ್ಬಗೋಡಿ ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದರು. ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry