ಭಾನುವಾರ, ಮೇ 16, 2021
22 °C

ತುಂತುರು ಮಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮಂಗಳವಾರ ಬೆಳಿಗ್ಗೆ 8.30 ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ರಾಜ್ಯದ ಹಲವೆಡೆ ತುಂತುರು ಮಳೆಯಾಗಿದೆ.



ಶೃಂಗೇರಿ (ಚಿಕ್ಕಮಂಗಳೂರು ಜಿಲ್ಲೆ), ಕಾರ್ಕಳ (ಉಡುಪಿ ಜಿಲ್ಲೆ), ಸಿದ್ದಾಪುರ, ಮಂಚಿಕೆರೆ (ಉತ್ತರ ಕನ್ನಡ ಜಿಲ್ಲೆ), ಬೆಳಗಾವಿ ವಿಮಾನ ನಿಲ್ದಾಣ, ಭಾಗಮಂಡಲ (ಕೊಡಗು ಜಿಲ್ಲೆ), ಕೊಟ್ಟಿಗೆಹಾರ, ಜಯಪುರ, ಕಳಸಗಳಲ್ಲಿ (ಚಿಕ್ಕಮಂಗಳೂರು ಜಿಲ್ಲೆ) ಸಾಧಾರಣ ಮಳೆಯಾಗಿದೆ.

ಬಳ್ಳಾರಿಯಲ್ಲಿ ಗರಿಷ್ಠ ಉಷ್ಣಾಂಶ 39.7 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.



ಮುನ್ಸೂಚನೆ: ಮುಂದಿನ 48 ಗಂಟೆಗಳ ಕಾಲ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.