ಭಾನುವಾರ, ಮೇ 16, 2021
21 °C

ತುಮಕೂರಿನಲ್ಲಿ ಪತ್ರಕರ್ತರ ರಾಷ್ಟ್ರೀಯ ಸಮ್ಮೇಳನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುಮಕೂರು: ತುಮಕೂರಿನಲ್ಲಿ ಪತ್ರಕರ್ತರ ರಾಷ್ಟ್ರೀಯ ಸಮ್ಮೇಳನ ನಡೆಯಲಿದೆ ಎಂದು ಐಎಫ್‌ಡಬ್ಲ್ಯೂಜೆ ಸಂಘಟನೆಯ ರಾಷ್ಟ್ರೀಯ ಘಟಕದ ಉಪಾಧ್ಯಕ್ಷ ಬಿ.ವಿ.ಮಲ್ಲಿಕಾರ್ಜುನಯ್ಯ ತಿಳಿಸಿದರು.ನಗರದ ಜಿಲ್ಲಾಸ್ಪತ್ರೆ ಸಭಾಂಗಣದಲ್ಲಿ ಈಚೆಗೆ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಜು.28-29ರಂದು  ಸಮ್ಮೇಳನ ನಡೆಸಲು ನಿರ್ಧರಿಸಲಾಗಿದೆ. ಸಮ್ಮೇ ಳನದ ಯಶಸ್ಸಿಗೆ ಜಿಲ್ಲೆಯ ಎಲ್ಲ ಪತ್ರಕರ್ತರೂ ಸಹಕಾರ ನೀಡಬೇಕು. ಜಿಲ್ಲಾ ಘಟಕದ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಸೂಚಿಸಿದರು.ಪತ್ರಿಕೋದ್ಯಮ ಎತ್ತ ಸಾಗುತ್ತಿದೆ? ಪತ್ರಕರ್ತರ ಸಮಕಾಲೀನ ಸವಾಲುಗಳೇನು? ಎಂಬ ಬಗ್ಗೆ  ಚರ್ಚೆ ನಡೆಯಬೇಕು. ಸಮ್ಮೇ ಳನದ ನೆನಪಾಗಿ ವಿಶೇಷ ಸ್ಮರಣ ಸಂಚಿಕೆ ಹೊರತರಬೇಕು. ದೇಶದ ವಿವಿಧೆಡೆಗಳಿಂದ ಬರುವ ಪತ್ರಕರ್ತ ಪ್ರತಿನಿಧಿಗಳಿಗೆ ತೊಂದರೆ ಯಾಗದಂತೆ ಸೌಲಭ್ಯ ಕಲ್ಪಿಸಿ ಕೊಡಬೇಕು ಎಂದು ಹೇಳಿದರು.ಪತ್ರಕರ್ತರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಗಂಗಾಧರ ಮೊದಲಿಯಾರ್ ಮಾತನಾಡಿ 90ರ ದಶಕದಲ್ಲಿ ತುಮಕೂರಿನಲ್ಲಿ  ರಾಷ್ಟ್ರೀಯ ಸಮ್ಮೇಳನವನ್ನು ಮಾದರಿಯಾಗಿ ನಡೆಸಲಾಗಿತ್ತು. ಸಮ್ಮೇಳನಕ್ಕೆ ಅನುದಾನ ಬಿಡುಗಡೆ ಮಾಡುವ ಸಂಬಂಧ ಸ್ಥಳೀಯ  ಶಾಸಕರು, ಜನಪ್ರತಿನಿಧಿಗಳು ಹಾಗೂ ಮುಖ್ಯಮಂತ್ರಿಯೊಂದಿಗೆ ಮತ್ತೊಮ್ಮೆ ಚರ್ಚಿಸೋಣ.ಪ್ರಸ್ತುತ ರಾಜ್ಯ ಬರ ಪರಿಸ್ಥಿತಿ ಎದುರಿಸುತ್ತಿರುವುದರಿಂದ ಜುಲೈ ತಿಂಗಳಲ್ಲಿ ಸಮ್ಮೇಳನ ನಡೆಸುವುದು ಸೂಕ್ತ ಎಂದು ಸಲಹೆ ನೀಡಿದರು.ಸಂಘದ ಜಿಲ್ಲಾ ಅಧ್ಯಕ್ಷ ಸೊಗಡು ವೆಂಕಟೇಶ್, ಪತ್ರಕರ್ತರಾದ ಜಿ.ಇಂದ್ರಕುಮಾರ್, ಎಚ್.ಎನ್.ಮಲ್ಲೇಶ್,  ಚಿ.ನೀ.ಪುರುಷೋತ್ತಮ್ ಇತರರು ಸಭೆಯಲ್ಲಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.