ತುರ್ತುಚಿಕಿತ್ಸಾ ಘಟಕಕ್ಕೆ ಬೀಗ: ದೂರು

7

ತುರ್ತುಚಿಕಿತ್ಸಾ ಘಟಕಕ್ಕೆ ಬೀಗ: ದೂರು

Published:
Updated:

ಚಿತ್ರದುರ್ಗ: ಜಿಲ್ಲಾ ಆಸ್ಪತ್ರೆಯ ತುರ್ತು ಅಪಘಾತ ಚಿಕಿತ್ಸಾ ಘಟಕ ಉದ್ಘಾಟನೆಯಾಗಿ ಮೂರು ತಿಂಗಳಾದರೂ ಬಾಗಿಲು ತೆರೆದಿಲ್ಲ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಎನ್. ಮೂರ್ತಿ ಬಣ)  ಜಿಲ್ಲಾ ಅಧ್ಯಕ್ಷ ಕೆ. ಮಹಾಲಿಂಗಪ್ಪ ದೂರಿದ್ದಾರೆ.ಇದರಿಂದ ಸಾರ್ವಜನಿಕರಿಗೆ ತುರ್ತು ಚಿಕಿತ್ಸೆ ಲಭ್ಯವಾಗದೆ ತೊಂದರೆಯಾಗುತ್ತಿದೆ. ಶೀಘ್ರದಲ್ಲಿ ಸಾರ್ವಜನಿಕರ ಅನುಕೂಲಕ್ಕೆ ಘಟಕವನ್ನು ತೆರೆಯಬೇಕು ಎಂದು ಒತ್ತಾಯಿಸಿದ್ದಾರೆ.18ಕ್ಕೆ ವಿಶೇಷ ಪೂಜೆ

ನಗರದ ಹೊಳಲ್ಕೆರೆ ರಸ್ತೆಯ ಸವದತ್ತಿ ರೇಣುಕಾಯಲ್ಲಮ್ಮ ದೇವಸ್ಥಾನದಲ್ಲಿ ಫೆ.18ರಂದು ಭಾರತ ಹುಣ್ಣಿಮೆ ಅಂಗವಾಗಿ ರೇಣುಕಾಯಲ್ಲಮ್ಮ ದೇವಿಗೆ ವಿಶೇಷ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ದೇವಸ್ಥಾನದ ಎಲ್. ತುಕಾರಾಮ ಚವಾಣ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಯುವ ಪ್ರಶಸ್ತಿಗೆ ಅರ್ಜಿ

ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆ ವತಿಯಿಂದ 2009-10ನೇ ಸಾಲಿನ ಜಿಲ್ಲಾ ಹಾಗೂ ರಾಜ್ಯ ಯುವ ಪ್ರಶಸ್ತಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಯುವಜನ ಸೇವೆ, ರಾಷ್ಟ್ರೀಯ ಅಭಿವೃದ್ಧಿ, ಸಮಾಜ ಸೇವೆ ಹಾಗೂ ನಿಸರ್ಗ ಸಂರಕ್ಷಣಾ ಕಾರ್ಯಕ್ರಮಗಳಲ್ಲಿ ಸೇವೆ ಸಲ್ಲಿಸಿದ 15ರಿಂದ 35ವರ್ಷ ಒಳಗಿನವರು ಅರ್ಹರಾಗಿತ್ತಾರೆ. ಆಸಕ್ತರು ಹೆಚ್ಚಿನ ವಿವರಗಳಿಗೆ ಕಚೇರಿಯ ದೂರವಾಣಿ: 08194 235 635 ಕರೆ ಮಾಡುವಂತೆ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಉಚಿತ ತರಬೇತಿ

ವಿಜನ್ ಸಂಸ್ಥೆ ವತಿಯಿಂದ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ, ಎಸ್‌ಡಿಎ-ಎಫ್‌ಡಿಎ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ ಹಮ್ಮಿಕೊಳ್ಳಲಾಗಿದೆ. ತರಬೇತಿ ಒಂದು ತಿಂಗಳ ಕಾಲ ಪ್ರತಿ ಶನಿವಾರ ಹಾಗೂ ಭಾನುವಾರದಂದು ಉಚಿತ ತರಬೇತಿ ನೀಡಲಾಗುತ್ತದೆ. ಆಸಕ್ತರು ಫೆ. 25ರ ಒಳಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗೆ ಮೊಬೈಲ್:  87924 18789 ಸಂಪರ್ಕಿಸುವಂತೆ ವಿಜನ್ ಸಂಸ್ಥೆಯ ಬಿ. ಲೋಕೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry