ಶನಿವಾರ, ಏಪ್ರಿಲ್ 10, 2021
32 °C

ತುರ್ತು ಲೋಕಪಾಲ ರಚನೆ: ಬಿಜೆಪಿ ಇಂಗಿತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ):  ಲೋಕಪಾಲ ಮಸೂದೆ ಕರಡು ರೂಪಿಸುವಲ್ಲಿ ಸರ್ಕಾರ ಮತ್ತು ನಾಗರಿಕ ಸಮಾಜದ ಪ್ರತಿನಿಧಿಗಳು ಕಾರ್ಯನಿರತರಾಗಿರುವ ಸಂದರ್ಭದಲ್ಲಿ ಪ್ರತಿಕ್ರಿಯಿಸಿರುವ ಬಿಜೆಪಿ, ಭ್ರಷ್ಟಾಚಾರದ ವಿರುದ್ಧ ಹೋರಾಡಲು ತ್ವರಿತವಾಗಿ ಲೋಕಪಾಲ ಸಂಸ್ಥೆಯನ್ನು ರಚಿಸಬೇಕೆಂಬ ನಿಲುವು ವ್ಯಕ್ತಪಡಿಸಿದೆ.‘ಸ್ವತಂತ್ರವಾದ ಲೋಕಪಾಲ ಸಂಸ್ಥೆಯನ್ನು ರಚಿಸುವುದಕ್ಕೆ ಬಿಜೆಪಿ ಬೆಂಬಲವಾಗಿದ್ದು, ಜೊತೆಗೆ ಇದನ್ನು ತುರ್ತಾಗಿ ಅನುಷಾನಕ್ಕೆ ತರಬೇಕು’ ಎಂದು ರಾಜ್ಯಸಭೆ ಪ್ರತಿಪಕ್ಷ ನಾಯಕ ಅರುಣ್ ಜೇಟ್ಲಿ ಭಾನುವಾರ ಇಲ್ಲಿ ಸುದ್ದಿಸಂಸ್ಥೆಯೊಂದಿಗೆ ಮಾತನಾಡುತ್ತಾ ಉತ್ತರಿಸಿದರು.ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಲೋಕಪಾಲ ಮಸೂದೆ ಅಂಗೀಕಾರಕ್ಕೆ ತಮ್ಮ ಪಕ್ಷ ಬದ್ಧವಾಗಿದೆ ಎಂಬುದನ್ನು ಬಿಜೆಪಿ ಹಿರಿಯ ನಾಯಕ  ಅಡ್ವಾಣಿ  ಹಣಕಾಸು ಸಚಿವ ಪ್ರಣವ್ ಮುಖರ್ಜಿ ಅವರಿಗೆ ಭರವಸೆ ನೀಡಿರುವುದನ್ನು ಸಮರ್ಥಿಸಿ ಜೇಟ್ಲಿ ಮೇಲಿನಂತೆ ನುಡಿದರು.2ಜಿ ಸ್ಪೆಕ್ಟ್ರಂ ಹಗರಣದ ತನಿಖೆಯಲ್ಲಿ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ಮತ್ತು ಸಂಸತ್ತಿನ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿ (ಪಿಎಸಿ), ಇವೆರಡೂ ಭಾಗಿಯಾದ ಬಗ್ಗೆ ಉಂಟಾದ ವಿವಾದಕ್ಕೆ ಸಂಬಂಧಿಸಿದಂತೆ ಮಾತನಾಡಿ, ಉಭಯ ಸಮಿತಿಗಳ ತನಿಖೆಯಿಂದ ಸ್ಪಷ್ಟ ಚಿತ್ರಣ ಹೊರಹೊಮ್ಮುವ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದರು.ಪಿಎಸಿ ಸಭೆಯಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಎರಡು ಸಮಿತಿಗಳ ತನಿಖೆ ಕುರಿತು ಭಿನ್ನಮತವಿರುವ ವರದಿಗಳ ಹಿನ್ನೆಲೆಯಲ್ಲಿ ಅವರು ಈ ರೀತಿ ಪ್ರತಿಕ್ರಿಯಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.