ಗುರುವಾರ , ಜನವರಿ 23, 2020
23 °C

ತೃತೀಯ ರಂಗದತ್ತ ಜೆಡಿಎಸ್‌

'ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಜನವರಿ ತಿಂಗಳ ಕೊನೆ ಅಥವಾ ಫೆಬ್ರುವರಿ ಮೊದಲ ವಾರ ತೃತೀಯ ರಂಗ ನಾಯಕರ ಸಮಾವೇಶ ನಡೆಯಲಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು.15 – 16 ಪ್ರಾದೇಶಿಕ ಪಕ್ಷಗಳ ನಾಯ­­ಕ­ರು ಸಮಾವೇಶದಲ್ಲಿ ಭಾಗವ­ಹಿಸ­ಲಿದ್ದು, ಅಧಿಕೃತ­ವಾಗಿ ತೃತೀಯ ರಂಗ­ಕ್ಕೆ ಚಾಲನೆ ದೊರೆಯಲಿದೆ ಎಂದು ಶನಿ­ವಾರ ಇಲ್ಲಿ ಪತ್ರಿಕಾ­ಗೋಷ್ಠಿಯಲ್ಲಿ ತಿಳಿಸಿದರು.ಸಮಾವೇಶವನ್ನು ಬೆಂಗಳೂರಿನಲ್ಲಿ  ನಡೆಸಬೇಕೇ ಅಥವಾ ಹೊರ ಭಾಗದಲ್ಲಿ ನಡೆಸಬೇಕೇ ಎಂಬುದು ಇನ್ನೂ ನಿರ್ಧಾರ­ವಾಗಿಲ್ಲ. ಸಂಚಾರಕ್ಕೆ ತೊಂದರೆ ಆಗಬಾರದು ಎಂಬುದನ್ನು ಗಮನದಲ್ಲಿ­ಟ್ಟು­ಕೊಂಡು ಸ್ಥಳವನ್ನು ಅಂತಿಮ­ಗೊಳಿಸಲಾಗುವುದು. 7 – 8 ಲಕ್ಷ ಜನ ಸೇರುವ ನಿರೀಕ್ಷೆ ಇದೆ ಎಂದು ತಿಳಿಸಿದರು.ಇದಕ್ಕೂ ಮುನ್ನ ಪಕ್ಷದ ಮುಖಂಡರ ಸಭೆಯಲ್ಲಿ ಮಾತನಾಡಿದ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ.­ದೇವೇಗೌಡ, ದೆಹಲಿಯಲ್ಲಿ ಆಮ್‌ ಆದ್ಮಿ ಪಕ್ಷದ ವಿಜಯ ಕಾಂಗ್ರೆಸ್‌ ಮತ್ತು ಬಿಜೆಪಿಗೆ ಭವಿಷ್ಯ ಇಲ್ಲ ಎಂಬುದನ್ನು ತೋರಿಸುತ್ತದೆ. ಮುಂದಿನ ದಿನಗಳಲ್ಲಿ ಪ್ರಾದೇಶಿಕ ಪಕ್ಷಗಳು ನಿರ್ಣಾಯಕ ಪಾತ್ರ ವಹಿಸಲಿವೆ. ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ ನಾಶ ವಾಗಲಿದೆ ಎಂದರು.ರಾಜ್ಯ ಸರ್ಕಾರ ದಿವಾಳಿ: ರಾಜ್ಯ ಸರ್ಕಾರ ದಿವಾಳಿಯಾಗಿದೆ. ಗುತ್ತಿಗೆ­ದಾರರಿಗೆ ಬಿಲ್‌ ಪಾವತಿಸಲು, ಶಿಕ್ಷಕರಿಗೆ ಸಂಬಳ ನೀಡಲು ಹಣ ಇಲ್ಲ ಎಂದು ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಎ.ಕೃಷ್ಣಪ್ಪ ಟೀಕಿಸಿದರು.

ಪ್ರತಿಕ್ರಿಯಿಸಿ (+)