ಮಂಗಳವಾರ, ಮೇ 18, 2021
22 °C

ತೆರವು ಕಾರ್ಯ ಕೈಬಿಡಲು ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಮಗಳೂರು:  ಒತ್ತುವರಿ ತೆರವಿಗೆ ಮುಂದಾದರೆ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಸಮಸ್ಯೆ ತಲೆದೋರುವ ಸಾಧ್ಯತೆಗಳಿವೆ. ಮುಖ್ಯಮಂತ್ರಿಗಳು ಅಧಿಕಾರಿಗಳ ಸಭೆ ಕರೆದು ಚರ್ಚಿಸಿ ತೆರವು ಕಾರ್ಯ ಕೈಬಿಡಲು ಸೂಚಿಸಬೇಕೆಂದು ಕೇಂದ್ರದ ಮಾಜಿ ಸಚಿವೆ ಡಿ.ಕೆ.ತಾರಾದೇವಿ ಸಿದ್ಧಾರ್ಥ ಮಂಗಳವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು.ಜೀವನ ನಿರ್ವಹಣೆಗೆಂದು ಸಣ್ಣ ಮತ್ತು ಮಧ್ಯಮ ವರ್ಗದವರು ಸಾಗುವಳಿ ಮಾಡಿದ್ದ ಭೂಮಿಯನ್ನು ಏಕಾಏಕಿ ತೆರವುಗೊಳಿಸಿದರೆ ಅ ಕುಟುಂಬ ಬೀದಿಗೆ ಬೀಳುತ್ತವೆ. ಸರ್ಕಾರ ಬಡವರ ಹಿತರಕ್ಷಣೆಗೆ ಮುಂದಾಗಬೇಕು ಆಗ್ರಹಿಸಿದರು.ಜಿಲ್ಲೆಯಲ್ಲಿ 55 ಸಾವಿರ ಎಕರೆ ಭೂಮಿ ಒತ್ತುವರಿಯಾಗಿದೆ. ಇದನ್ನು ಖುಲ್ಲಾ  ಪಡಿಸುವಂತೆ  ಬಾಲಸುಬ್ರ ಹ್ಮಣ್ಯಂ ನೀಡಿ  ರುವ ವರದಿ ಯಲ್ಲಿ ಸಲಹೆ  ನೀಡಲಾಗಿದೆ.  ಕಂದಾಯ  ಭೂಮಿಯನ್ನು  ಅರಣ್ಯ  ಇಲಾಖೆ  ವರ್ಗಾಯಿಸುವಾಗ ಈ ಭೂಮಿಯಲ್ಲಿ ಯಾರ‌್ಯಾರು ಎಷ್ಟು ಎಕರೆಯಲ್ಲಿ ಸಾಗುವಳಿ ಮಾಡಿದ್ದಾರೆಂದು ತಿಳಿಯದೆ ಭೂಮಿ ಹಸ್ತಾಂತರಿಸಲಾಗಿದೆ. ಇದರಿಂದ ಈಗ ಸಮಸ್ಯೆ ತಲೆದೋರಲು ಮುಖ್ಯ ಕಾರಣ ಎಂದು ತಿಳಿಸಿದರು.ಅಧಿಕಾರಿಗಳು ನೀಡಿರುವ ಮಾಹಿತಿಯೇ ಬಾಲಸುಬ್ರಹ್ಮಣ್ಯಂ ನೀಡಿರುವ ವರದಿಯಾಗಿದೆ. ಸ್ಥಳಕ್ಕೆ ತೆರಳಿ ಪರಿಶೀಲಿಸದೆ ಅಧಿಕಾರಿಗಳು ಕಚೇರಿಯಲ್ಲಿ ಕುಳಿತು ಭೂಮಿ ವರ್ಗಾವಣೆಗೊಳಿಸಿದ್ದರಿಂದ ಹಲವು ವರ್ಷಗಳಿಂದ ಸಾಗುವಳಿ ಮಾಡಿಕೊಂಡು ಬಂದಿದ್ದ ಬಡವರು, ಕೂಲಿಕಾರ್ಮಿಕರು ಭೂಮಿ ಕಳೆದುಕೊಳ್ಳುವಂತಾಗಿದೆ ಎಂದು ಹೇಳಿದರು.ಭೂಮಿ ಕಬಳಿಕೆಯಾಗಿದೆ. ಒಂದೇ ದೃಷ್ಟಿಯಲ್ಲಿ ನೋಡುವುದು ಸರಿಯಲ್ಲ. ಒತ್ತುವರಿ ಸಮಸ್ಯೆಗೆ ನಾನಾ ಮುಖಗಳಿರುವುದರಿಂದ ಈ ಬಗ್ಗೆ ಅಧ್ಯಯನ ನಡೆಸುವುದು ಸೂಕ್ತ. ಒತ್ತುವರಿಗೆ ಸಂಬಂಧಿಸಿದಂತೆ ಪುನರ್ ಪರಿಶೀಲನೆಗೆ ಸರ್ಕಾರ ಜನಪರ ಹೋರಾಟದಲ್ಲಿ ತೊಡಗಿಸಿಕೊಂಡಿರುವವರನ್ನು ಒಳಗೊಂಡ ಸಮಿತಿ ರಚಿಸಬೇಕು. ಈ ಹಿಂದೆ ಭೂಮಿ ಒತ್ತುವರಿ ಮಾಡಿ, ಬೇಲಿ ನಿರ್ಮಿಸುತ್ತಿದ್ದಾಗ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಏನು ಮಾಡುತ್ತಿದ್ದರು? ಎಂದು ಪ್ರಶ್ನಿಸಿದರು.ಒತ್ತುವರಿ ತೆರವಿಗೆ ಆಯಾ ಇಲಾಖೆ ಅಧಿಕಾರಿಗಳು ನೋಟಿಸ್ ಜಾರಿಗೊಳಿಸುತ್ತಿದ್ದಾರೆ. ಜನಸ್ನೇಹಿಯಾಗಿ ಕೆಲಸ ನಿರ್ವಹಿಸುವುದು ಸರ್ಕಾರದ ಕರ್ತವ್ಯ ಎಂದು ಅವರು ಹೇಳಿದರು.ಭಾರೀ ಭೂಮಾಲೀಕರು ಮಾಡಿರುವ ಒತ್ತುವರಿ ಬಗ್ಗೆ ಪ್ರತಿಕ್ರಿಯಿಸಿ, ಮುಖ್ಯಮಂತ್ರಿಗಳು ಸಭೆ ನಡೆಸಿ, ಅಂತಿಮ ತೀರ್ಮಾನ ಕೈಗೊಳ್ಳಬೇಕು ಎಂದರು.ಗುಟ್ಕಾ ನಿಷೇಧ:  ಗುಟ್ಕಾ ನಿಷೇಧ ಅನಿವಾರ್ಯ. ಇದರಲ್ಲಿ ಎರಡು ಮಾತಿಲ್ಲ. ಆದರೆ, ಹಳದಿ ಎಲೆ ರೋಗದಿಂದ ತತ್ತರಿಸಿ ಹೋಗಿರುವ ಅಡಿಕೆ ಬೆಳೆಗಾರರಿಗೆ ಅಡಿಕೆ ಬೆಲೆಯೂ ಕುಸಿದಿದ್ದು, ಬೆಳೆಗಾರರ ಸಮಸ್ಯೆ ಪರಿಹರಿಸಲು ಸೂಕ್ತ ಗಮನ ಹರಿಸಬೇಕು ಎಂದು ಅವರು ಹೇಳಿದರು.ಪಕ್ಷದ ಜಿಲ್ಲಾ ಉಪಾಧ್ಯಕ್ಷ ಡಿ.ಎಲ್.ವಿಜಯಕುಮಾರ್, ಜಿಲ್ಲಾ ವಕ್ತಾರ ಎ.ಎನ್.ಮಹೇಶ್ ಹಾಜರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.