ನವದೆಹಲಿ (ಪಿಟಿಐ): ತೆರಿಗೆ ವಿವಾದಕ್ಕೆ ಸಂಬಂಧಿಸಿದಂತೆ ದ್ವಿಪಕ್ಷೀಯ ಹೂಡಿಕೆ ರಕ್ಷಣೆ ಒಪ್ಪಂದದ (ಬಿಐಟಿ) ಅಡಿಯಲ್ಲಿ ವೊಡಾಫೋನ್ ಸಂಸ್ಥೆಯು ಸರ್ಕಾರಕ್ಕೆ ನೋಟಿಸ್ ನೀಡಿದೆ.

2012ರ ಹಣಕಾಸು ಮಸೂದೆಯಲ್ಲಿ ಅಡಕವಾಗಿರುವ ಪ್ರಸ್ತಾವಗಳಿಗೆ ಸಂಬಂಧಿಸಿದಂತೆ ವೊಡಾಫೋನ್ ಇಂಟರ್ನ್ಯಾಷನಲ್ ಹೋಲ್ಡಿಂಗ್ಸ್ ಬಿವಿ (ವಿಐಎಚ್ಬಿವಿ) ಸರ್ಕಾರಕ್ಕೆ ನೋಟಿಸ್ ಕಳುಹಿಸಿದ್ದು, ಭಾರತದಲ್ಲಿ ವೊಡಾಫೋನ್ ಹಾಗೂ ಇತರ ವಿದೇಶಿ ಹೂಡಿಕೆದಾರರಿಗೆ ನೀಡಿದ್ದ ಕಾನೂನು ರಕ್ಷಣೆಗಳನ್ನು ಉಲ್ಲಂಘಿಸಲಾಗಿದೆ ಎಂದು ಆರೋಪಿಸಿದೆ.

ಉದ್ದೇಶಿತ ಕಾಯ್ದೆ ರದ್ದುಗೊಳಿಸಬೇಕು, ಇಲ್ಲವೇ ಅದರಲ್ಲಿನ ಪೂರ್ವಾನ್ವಯ ಅಂಶಕ್ಕೆ ಸೂಕ್ತ ತಿದ್ದುಪಡಿ ತರಬೇಕು ಎಂದು ಅದು ಕೇಂದ್ರವನ್ನು ಕೇಳಿದೆ. ಒಂದು ವೇಳೆ ಸರ್ಕಾರ ಈ ಪ್ರಕಾರ ನಡೆದುಕೊಳ್ಳದಿದ್ದರೆ, ಸಂಸ್ಥೆಯು ಷೇರುದಾರರ ಹಿತಾಸಕ್ತಿ ಕಾಪಾಡಲು ಅಗತ್ಯ ಕ್ರಮ ತೆಗೆದುಕೊಳ್ಳಲಿದೆ ಮತ್ತು ಅಂತರ ರಾಷ್ಟ್ರೀಯ ಮಧ್ಯಸ್ಥಿಕೆ ನ್ಯಾಯಾಲಯದ ಮೊರೆ ಹೋಗಲಿದೆ ಎಂದು ಬೆದರಿಕೆ ಹಾಕಿದೆ.

ವೊಡಾಫೋನ್ ಸಂಸ್ಥೆ ಆದಾಯ ತೆರಿಗೆ ಇಲಾಖೆಗೆ ರೂ 11,000 ಕೋಟಿ ತೆರಿಗೆ ಕಟ್ಟಬೇಕಾಗಿಲ್ಲ ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿತ್ತು. ಹಿನ್ನೆಲೆಯಲ್ಲಿ ಪ್ರಸಕ್ತ ಬಜೆಟ್ನಲ್ಲಿ ಸರ್ಕಾರವು, ವೊಡಾಫೋನ್ ಸಂಸ್ಥೆಯನ್ನು ತೆರಿಗೆ ವ್ಯಾಪ್ತಿಗೆ ಒಳಪಡಿಸಲು ಆದಾಯ ತೆರಿಗೆ ಕಾಯ್ದೆಗೆ ತಿದ್ದುಪಡಿ ತರುವ ಪ್ರಸ್ತಾವ ಇಟ್ಟಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.