ಮಂಗಳವಾರ, ಜೂನ್ 15, 2021
24 °C

ತೆಲಂಗಾಣಕ್ಕೆ ಸಿಬ್ಬಂದಿ ಹಂಚಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೈದರಾಬಾದ್‌(ಪಿಟಿಐ): ತೆಲಂಗಾಣ ಮತ್ತು ಸೀಮಾಂಧ್ರ ರಾಜ್ಯಗಳಿಗೆ ಪೊಲೀಸ್‌ ಸಿಬ್ಬಂದಿ ಮತ್ತು ಮೂಲಸೌಕರ್ಯ ಹಂಚಿಕೆಯ ಕಾರ್ಯ ಆರಂಭವಾಗಿದೆ ಎಂದು ಆಂಧ್ರಪ್ರದೇಶ ಪೊಲೀಸ್‌ ಮಹಾನಿರ್ದೇಶಕ ಬಿ.ಪ್ರಸಾದ್‌ ರಾವ್‌ ಹೇಳಿದ್ದಾರೆ.‘ವಿಭಜನೆ ಪ್ರಕ್ರಿಯೆ ಸದ್ಯ ಆರಂಭವಾಗಿದೆ. ಸರ್ಕಾರಿ ನೌಕರರ ನೇಮಕಕ್ಕೆ ಸರ್ಕಾರದ ಹಂತದಲ್ಲಿ ವಿವಿಧ ಸಮಿತಿಗಳನ್ನು ರಚಿಸಲಾಗಿದೆ. ಪೊಲೀಸ್‌ ಇಲಾಖೆಯಲ್ಲೂ ಸಮಿತಿಗಳನ್ನು ರಚಿಸಿದ್ದೇವೆ. ಈ ಸಂಬಂಧ ಸಭೆ ನಡೆಸಲಾಗಿದೆ. ಸಿಬ್ಬಂದಿ ಮತ್ತು ಆಸ್ತಿ ವರ್ಗಾವಣೆ ನಡೆಯುತ್ತಿದೆ’ ಎಂದು ಸುದ್ದಿಗಾರರಿಗೆ ತಿಳಿಸಿದರು.  ಈ ಪ್ರಕ್ರಿಯೆ ಮುಂಬರುವ ಲೋಕಸಭಾ ಚುನಾವಣೆಗೆ ಪೊಲೀಸ್‌ ಸಿಬ್ಬಂದಿ ನೇಮಕಕ್ಕೆ ಅಡ್ಡಿಯಾಗುವುದೇ ಎಂಬ ಸುದ್ದಿಗಾರರಿಗೆ ಉತ್ತರಿಸಿದ ಡಿಜಿಪಿ, ಪೊಲೀಸ್‌ ಸಿಬ್ಬಂದಿ ನೇಮಕ ಹಾಗೂ ಮೂಲಸೌಕರ್ಯ ಮತ್ತು ಸಿಬ್ಬಂದಿ ಹಂಚಿಕೆ ಏಕಕಾಲದಲ್ಲಿ ನಡೆಯಲಿದೆ’ ಎಂದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.