ಭಾನುವಾರ, ಜನವರಿ 19, 2020
29 °C

ತೆಲಂಗಾಣ: ಪೊಲೀಸರ ಮೇಲೆ ವಿದ್ಯಾರ್ಥಿಗಳ ಹಲ್ಲೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೈದರಾಬಾದ್(ಪಿಟಿಐ): ತೆಲಂಗಾಣ ಪರ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು ಬುಧವಾರ ಭದ್ರತಾ ಸಿಬ್ಬಂದಿ ಮೇಲೆ ಕಲ್ಲು ತೂರಾಟ ನಡೆಸಿದ್ದು, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಅಶ್ರುವಾಯು ಸಿಡಿಸಿದ ಹಿನ್ನೆಲೆಯಲ್ಲಿ ಉಸ್ಮಾನಿಯ ವಿಶ್ವವಿದ್ಯಾಲಯ ಆವರಣದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.ವಿದ್ಯಾರ್ಥಿಗಳು ಕ್ಯಾಂಪಸ್ ಆವರಣದಿಂದ ತೆಲಂಗಾಣ ಪರ ಪ್ರತಿಭಟನಾ ಮೆರವಣಿಗೆ ನಡೆಸಿದ ವೇಳೆ ಪೊಲೀಸರು ಅಲ್ಲಿನ ಎನ್‌ಸಿಸಿ ದ್ವಾರದಲ್ಲಿ ತಡೆದರು. ಇದರಿಂದ ಸಿಟ್ಟಿಗೆದ್ದ ವಿದ್ಯಾರ್ಥಿಗಳು ಘೋಷಣೆಗಳನ್ನು ಕೂಗಿ ಬ್ಯಾರಿಕೇಡ್‌ಗಳನ್ನು ತಳ್ಳಿ, ಟಯರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ ವಿದ್ಯಾರ್ಥಿಗಳು ಪೊಲೀಸರತ್ತ ಕಲ್ಲು ತೂರಿದ್ದಾರೆ.ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಅಶ್ರುವಾಯು ಸಿಡಿಸಿ, ಪ್ರತಿಭಟನಾ ನಿರತ ಗುಂಪನ್ನು ಚದುರಿಸಿದ್ದಾರೆ.ಅಶ್ರುವಾಯು ಸಿಡಿಸಿ ಗುಂಪನ್ನು ಚದುರಿಸಿದ ನಂತರ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಇನ್‌ಸ್ಪೆಕ್ಟರ್ ಪಿ. ಅಶೋಕ್ ತಿಳಿಸಿದ್ದಾರೆ. ಘಟನೆಯಲ್ಲಿ ಇನ್‌ಸ್ಪೆಕ್ಟರ್ ವಿಜಯ ಶ್ರೀನಿವಾಸ್ ಗಾಯಗೊಂಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಪ್ರತಿಕ್ರಿಯಿಸಿ (+)