ಭಾನುವಾರ, ಜೂನ್ 13, 2021
24 °C

ತೆಲಂಗಾಣ: ಪ್ರಾಣ ತೊರೆದ ಯುವಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಾರಂಗಲ್ (ಪಿಟಿಐ):  ಪ್ರತ್ಯೇಕ ತೆಲಂಗಾಣ ರಾಜ್ಯಕ್ಕೆ ಒತ್ತಾಯಿಸಿ ಯುವಕನೊಬ್ಬ ವಾರಂಗಲ್‌ನಲ್ಲಿ ಸೋಮವಾರ ಆತ್ಮಾಹುತಿ ಮಾಡಿಕೊಂಡಿದ್ದಾನೆ. ಆತ್ಮಾಹುತಿಗೆ ಯತ್ನಿಸಿದ ಇನ್ನೊಬ್ಬ ಯುವಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರತ್ಯೇಕ ರಾಜ್ಯದ ಬೇಡಿಕೆ ಈಡೇರಿಸಲು ಕೇಂದ್ರ ಸರ್ಕಾರ ಕೂಡಲೇ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್) ಮಂಗಳವಾರ ತೆಲಂಗಾಣ ಪ್ರಾಂತ್ಯದಲ್ಲಿ ಬಂದ್‌ಗೆ ಕರೆ ನೀಡಿದೆ.30 ವರ್ಷದ ರಾಜಮೌಳಿ ಮೈಮೇಲೆ ಪೆಟ್ರೋಲ್ ಸುರಿದುಕೊಂಡು `ಜೈ ತೆಲಂಗಾಣ~ ಘೋಷಣೆ ಕೂಗಿ ಬೆಂಕಿ ಹಚ್ಚಿಕೊಂಡಿದ್ದಾಗಿ ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಇಲ್ಲಿನ ಹನಮಕೊಂಡಾದ ಸಾರ್ವಜನಿಕ ಉದ್ಯಾನದಲ್ಲಿ ಈ ಘಟನೆ ಜರುಗಿದೆ. ಇದೇ ಸ್ಥಳದಲ್ಲಿ 2 ದಿನಗಳ ಹಿಂದಷ್ಟೇ ಎಂಬಿಎ ವಿದ್ಯಾರ್ಥಿ ಎಲ್.ಭೋಜ್ಯ ನಾಯ್ಕ ಇದೇ ವಿಷಯಕ್ಕೆ ಸಂಬಂಧಿಸಿದಂತೆ ಆತ್ಮಾಹುತಿ ಮಾಡಿಕೊಂಡಿದ್ದ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.