ಮಂಗಳವಾರ, ಏಪ್ರಿಲ್ 20, 2021
32 °C

ತೆಲಂಗಾಣ ಬೆಂಬಲಿಗರಿಂದ ಕರಾಳ ದಿನಾಚರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೈದರಾಬಾದ್: ಪ್ರತ್ಯೇಕ ತೆಲಂಗಾಣ ರಾಜ್ಯ ರಚನೆ ಬೆಂಬಲಿಗರು ಸತತ ಎರಡನೇ ವರ್ಷವೂ ಆಂಧ್ರ ಪ್ರದೇಶದ 57ನೇ ರಾಜ್ಯೋತ್ಸವವನ್ನು ಕರಾಳ ದಿನವನ್ನಾಗಿ ಆಚರಿಸಿದರು.ಆಂಧ್ರ್ರಪ್ರದೇಶದ 57ನೇ ಹುಟ್ಟುಹಬ್ಬದ ದಿನವಾದ ಗುರುವಾರ ತೆಲಂಗಾಣ ರಾಜ್ಯದ ಬೆಂಬಲಿಗರು ಪ್ರತಿಭಟನೆ, ಧರಣಿಗಳನ್ನು ನಡೆಸಿದರು. ಹಲವು ಕಡೆಗಳಲ್ಲಿ ಕಪ್ಪು ಬಾವುಟಗಳನ್ನು ಹಾರಿಸಲು ಯತ್ನಿಸಿದರು.

ರಾಜ್ಯೋತ್ಸವದ ಅಂಗವಾಗಿ ಮುಖ್ಯಮಂತ್ರಿ ಕಿರಣ್ ಕುಮಾರ್ ರೆಡ್ಡಿ ಅವರು ಹೈದರಾಬಾದ್‌ನಲ್ಲಿ ಧ್ವಜಾರೋಹಣ ಮಾಡಿದರು.ತೆಲಂಗಾಣ ಬೆಂಬಲಿಗರನ್ನು ಹತ್ತಿಕ್ಕುವ ಸಲುವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ತೆಲಂಗಾಣ ರಾಜ್ಯ ರಚನೆ ಪರ ಒಲವು ಹೊಂದಿರುವ ಮಾಧ್ಯಮಗಳಿಗೂ ಕಾರ್ಯಕ್ರಮಕ್ಕೆ ಆಹ್ವಾನವನ್ನು ನಿರಾಕರಿಸಲಾಗಿತ್ತು.

 

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.