ನವದೆಹಲಿ (ಪಿಟಿಐ): ಪ್ರತ್ಯೇಕ ತೆಲಂಗಾಣ ರಾಜ್ಯ ರಚಿಸಿರುವುದನ್ನು ಪ್ರಶ್ನಿಸಿ ಆಂಧ್ರಪ್ರದೇಶ ಮಾಜಿ ಮುಖ್ಯಮಂತ್ರಿ ಕಿರಣ್ ಕುಮಾರ್ ರೆಡ್ಡಿ ಸುಪ್ರೀಂಕೋರ್ಟ್ಗೆ ಗುರುವಾರ ಅರ್ಜಿ ಸಲ್ಲಿಸಿದ್ದಾರೆ.

ಮುಖ್ಯನ್ಯಾಯಮೂರ್ತಿ ಪಿ. ಸದಾಶಿವಂ ನೇತೃತ್ವದ ಪೀಠ ಈ ಅರ್ಜಿಯನ್ನು ಶುಕ್ರವಾರ ವಿಚಾರಣೆಗೆ ಕೈಗೆತ್ತಿಕೊಳ್ಳಲಿದೆ. ಆಂಧ್ರಪ್ರದೇಶ ವಿಭಜನೆಗೆ ಸಂಬಂಧಿಸಿದ ಇತರ ಹಲವು ಅರ್ಜಿಗಳ ವಿಚಾರಣೆ ಕೂಡ ಇದೇ ಸಂದರ್ಭದಲ್ಲಿ ನಡೆಯಲಿದೆ.

‘ಮಸೂದೆಗೆ ಸಂಸತ್ ಅನುಮೋದನೆ ನೀಡಿಲ್ಲ. ಹಾಗಾಗಿ ಅರ್ಜಿಯ ವಿಚಾರಣೆಗೆ ಇದು ಸಮಯವಲ್ಲ’ ಎಂದು ಫೆ. 7 ಮತ್ತು 17ರಂದು ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿತ್ತು. ಆದರೆ ಸೂಕ್ತ ಸಮಯದಲ್ಲಿ ಮತ್ತೆ ಅರ್ಜಿ ಸಲ್ಲಿಸುವುದಕ್ಕೆ ಅವಕಾಶ ಇದೆ ಎಂಬುದನ್ನು ಸುಪ್ರೀಂಕೋರ್ಟ್ ಆಗಲೇ ಸ್ಪಷ್ಟಪಡಿಸಿತ್ತು.

ಜೂನ್ 2 ತೆಲಂಗಾಣ ರಾಜ್ಯ ಸ್ಥಾಪನಾ ದಿನ ಎಂದು ಕೇಂದ್ರ ಗೃಹ ಸಚಿವಾಲಯ ಈಗಾಗಲೇ ಘೋಷಿಸಿದ್ದು, ಅಂದಿನಿಂದ ತೆಲಂಗಾಣ ರಾಜ್ಯವಾಗಿ ಕಾರ್ಯನಿರ್ವಹಣೆ ಆರಂಭಿಸಲಿದೆ ಎಂದು ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.