ತೆಲಗಿಗೆ ಮತ್ತೆ 10 ವರ್ಷ ಕಠಿಣ ಸಜೆ

ಶನಿವಾರ, ಜೂಲೈ 20, 2019
22 °C

ತೆಲಗಿಗೆ ಮತ್ತೆ 10 ವರ್ಷ ಕಠಿಣ ಸಜೆ

Published:
Updated:

ಪುಣೆ (ಪಿಟಿಐ): ನಕಲಿ ಸ್ಟ್ಯಾಂಪ್ ಪೇಪರ್ ಹಗರಣದ ಆರೋಪಿ ಅಬ್ದುಲ್ ಕರೀಂ ತೆಲಗಿಗೆ ಇಲ್ಲಿನ ವಿಶೇಷ ನ್ಯಾಯಾಲಯವು ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ 10 ವರ್ಷಗಳ ಕಠಿಣ ಸಜೆ ಹಾಗೂ 9 ಲಕ್ಷ ರೂಪಾಯಿ ದಂಡ ವಿಧಿಸಿದೆ.ನಾಸಿಕ್ ಪೊಲೀಸರು ದಾಖಲಿಸಿದ್ದ ಪ್ರಕರಣದ ಹಿನ್ನೆಲೆಯಲ್ಲಿ ಈ ಶಿಕ್ಷೆ ನೀಡಲಾಗಿದೆ. ನಕಲಿ ಸ್ಟ್ಯಾಂಪ್ ಪೇಪರ್ ಹಗರಣಕ್ಕೆ ಸಂಬಂಧಿಸಿದಂತೆ ತೆಲಗಿ ವಿರುದ್ಧ 47 ಪ್ರಕರಣಗಳು ದಾಖಲಾಗಿವೆ. ಎರಡು ಪ್ರಕರಣಗಳಲ್ಲಿ ಈಗಾಗಲೇ ಶಿಕ್ಷೆಗೆ ಒಳಗಾಗಿರುವ ತೆಲಗಿ, ಸದ್ಯ ಬೆಂಗಳೂರು ಜೈಲಿನಲ್ಲಿ ಸೆರೆವಾಸ ಅನುಭವಿಸುತ್ತಿದ್ದಾನೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry