ಗುರುವಾರ , ಜೂನ್ 17, 2021
23 °C

ತೆಳ್ಳನೂರು: ಕೆರೆ ಜಾಗ ಒತ್ತುವರಿ ತೆರವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸಂತೇಮರಹಳ್ಳಿ: ಸಮೀಪದ ತೆಳ್ಳನೂರು ಗ್ರಾಮದಲ್ಲಿ ಖಾಸಗಿ ವ್ಯಕ್ತಿಗಳಿಂದ ಒತ್ತುವರಿಯಾಗಿದ್ದ ಕೆರೆಯನ್ನು ಕಂದಾಯ ಅಧಿಕಾರಿಗಳು ಗುರುವಾರ ತೆರವುಗೊಳಿಸಿದರು.ಒತ್ತುವರಿಯಾಗಿರುವ ಕೆರೆಯನ್ನು ಕಂದಾಯ ಅಧಿಕಾರಿಗಳು ಪರಿಶೀಲನೆ ನಡೆಸಿದರಲ್ಲದೇ,  ಉಳಿದಿರುವ ಕೆರೆಗಳ ಸರ್ವೆ ನಡೆಸಲು ಮುಂದಾಗಿರುವುದು ಜನರ ಹರ್ಷಕ್ಕೆ ಕಾರಣವಾಗಿದೆ.ಈ ಸಂದರ್ಭದಲ್ಲಿ ಮಾತನಾಡಿದ ಸಂತೇಮರಹಳ್ಳಿ ನಾಡಕಚೇರಿಯ ಉಪತಹಶೀಲ್ದಾರ್‌ ಪ್ರಭುರಾಜ್‌, ಸರ್ಕಾರದ ನಿರ್ದೇಶನ ಮತ್ತು ಜಿಲ್ಲಾಧಿಕಾರಿಯವರ ಆದೇಶದ ಮೇರೆಗೆ ಒತ್ತುವರಿಯಾಗಿರುವ ಸರ್ಕಾರಕ್ಕೆ ಸೇರಿದ ಕೆರೆಗಳು ಮತ್ತು ರಸ್ತೆಗಳನ್ನು ತೆರವುಗೊಳಿಸಲಾಗುತ್ತಿದೆ. ಗ್ರಾಮದ ಸರ್ವೆ ನಂ 23 ರಲ್ಲಿ 1.29 ಎಕರೆ ವಿಸ್ತೀರ್ಣದಲ್ಲಿ ಕೆರೆ ಇದ್ದು, 1 ಎಕರೆ ಪ್ರದೇಶ ಖಾಸಗಿ ವ್ಯಕ್ತಿಗಳಿಂದ ಒತ್ತುವರಿಯಾಗಿತ್ತು. ಒತ್ತುವರಿಯಾಗಿರುವ ಕೆರೆಯನ್ನು ಈಗಾಗಲೇ ತೆರವುಗೊಳಿಸಲಾಗಿದೆ. ಗ್ರಾಮದಲ್ಲಿ ಉಳಿದಿರುವ 3 ಕೆರೆಗಳನ್ನು ಸರ್ವೆ ಮಾಡಿ ಒತ್ತುವರಿಯಾಗಿರುವ ಸ್ಥಳವನ್ನು ತೆರವುಗೊಳಿಸಲು ಕ್ರಮಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.ಗ್ರಾಮಲೆಕ್ಕಿಗರಾದ ನಾಗರಾಜು, ಲಿಂಗರಾಜಮೂರ್ತಿ, ರಮೇಶ್, ಶಿವಕುಮಾರ್, ವಿಜಯರಾಜ್, ಗ್ರಾಮಸಹಾಯಕ ಬಸವಣ್ಣ, ಪುಟ್ಟರಾಜು, ರವಿ ಹಾಜರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.