ಗುರುವಾರ , ಫೆಬ್ರವರಿ 25, 2021
29 °C

ತೇಜಸ್ವಿನಿ ಗೌಡ ಬಿಜೆಪಿಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತೇಜಸ್ವಿನಿ ಗೌಡ ಬಿಜೆಪಿಗೆ

ಬೆಂಗಳೂರು: ಲೋಕಸಭೆ ಮಾಜಿ ಸದಸ್ಯೆ ತೇಜಸ್ವಿನಿಗೌಡ ಬುಧವಾರ ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದರು.ಪಕ್ಷದ ರಾಜ್ಯ ಅಧ್ಯಕ್ಷ ಪ್ರಹ್ಲಾದ ಜೋಶಿ ಅವರು ತೇಜಸ್ವಿನಿ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು.2004ರ ಚುನಾವಣೆಯಲ್ಲಿ ಕನಕಪುರ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿ ಅವರು ಗೆದ್ದಿದ್ದರು. 2009ರ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಸ್ಪರ್ಧಿಸಿ ಪರಾಜಯಗೊಂಡಿದ್ದರು. 2013ರ ವಿಧಾನಸಭಾ ಚುನಾವಣೆಯಲ್ಲೂ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಸ್ಪರ್ಧಿಸಿ ಸೋತಿದ್ದರು.ಪಕ್ಷ ಸೇರಿದ ನಂತರ ಸುದ್ದಿಗಾರರ ಜತೆ ಮಾತ­ನಾಡಿದ ತೇಜಸ್ವಿನಿ ಅವರು,  ಕಾಂಗ್ರೆಸ್ಸಿಗರು ನುಡಿ­ದಂತೆ ನಡೆಯಲಿಲ್ಲ. ಹೀಗಾಗಿ ಮೋದಿ ಅವರನ್ನು ಬೆಂಬಲಿಸಲು ಬಿಜೆಪಿ ಸೇರಿರುವುದಾಗಿ ಹೇಳಿದರು.‘ಬಿಜೆಪಿ ಪರ ಪ್ರಚಾರ ಮಾಡುತ್ತೇನೆ. ಅಧಿಕಾರದ ಆಸೆಗಾಗಿ ಬಿಜೆಪಿ ಸೇರುತ್ತಿಲ್ಲ’ ಎಂದು ಸ್ಪಷ್ಟಪಡಿಸಿದರು. ಜೋಶಿಮಾತನಾಡಿ, ‘ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಗೃಹ ಸಚಿವ ಕೆ.ಜೆ.ಜಾರ್ಜ್‌ ಅವರ ಖಾತೆಯನ್ನು ಬದಲಿಸಬೇಕು’ ಎಂದು ಆಗ್ರಹಪಡಿಸಿದರು.ಕೊಲೆ, ಹಲ್ಲೆ, ದೌರ್ಜನ್ಯ ಪ್ರಕರಣಗಳು ಹೆಚ್ಚಾಗಿವೆ. ರಾಜ್ಯದ ಗೃಹ ಸಚಿವರು ಕೇವಲ ಒಂದು ಸಮುದಾಯಕ್ಕೆ ಸಚಿವ ಅಲ್ಲ ಎನ್ನುವುದು ಅರ್ಥ ಮಾಡಿಕೊಳ್ಳಬೇಕು. ಬಿಜೆಪಿ ಕಾರ್ಯಕರ್ತರನ್ನು ರೌಡಿ ಪಟ್ಟಿಗೆ ಸೇರಿಸುವ ಕೆಲಸ ನಡೆಯುತ್ತಿದ್ದು, ಅದರ ವಿರುದ್ಧ ಹೋರಾಟ ನಡೆಸುವುದಾಗಿ ಹೇಳಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.