ಪಣಜಿ (ಪಿಟಿಐ): ಸಹೋದ್ಯೋಗಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಬಂಧಿತರಾಗಿರುವ ‘ತೆಹೆಲ್ಕಾ’ ನಿಯತಕಾಲಿಕೆಯ ಸಂಸ್ಥಾಪಕ ಸಂಪಾದಕ ತರುಣ್ ತೇಜ್ಪಾಲ್ ಅವರನ್ನು 12 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ ಗೋವಾ ಕೋರ್ಟ್ ಆದೇಶ ಹೊರಡಿಸಿದೆ.

ತೇಜ್ಪಾಲ್ ಅವರ ಹತ್ತು ದಿನಗಳ ಪೊಲೀಸ್ ಕಸ್ಟಡಿ ಬುಧವಾರ ಕೊನೆಗೊಂಡ ಹಿನ್ನೆಲೆಯಲ್ಲಿ, ಪ್ರಥಮ ದರ್ಜೆ ನ್ಯಾಯಾಧೀಶರಾದ ಮ್ಯಾಜಿಸ್ಟ್ರೇಟ್ ಕ್ಷಮಾ ಜೋಶಿ, ತೇಜ್ಪಾಲ್ ಅವರನ್ನು 12 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದರು.

ಸದ್ಯ ಪಣಜಿ ಪೊಲೀಸರ ವಶದಲ್ಲಿರುವ ತೇಜ್ಪಾಲ್ ಅವರನ್ನು ವಾಸ್ಕೊದಲ್ಲಿರುವ ಸಾದಾ ಉಪ ಕಾರಾಗೃಹಕ್ಕೆ ಕಳುಹಿಸುವ ಸಾಧ್ಯತೆಗಳಿವೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಸಹೋದ್ಯೋಗಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ತೇಜ್ಪಾಲ್ ಅವರನ್ನು ಗೋವಾ ಪೊಲೀಸರು ನವೆಂಬರ್ 30ರಂದು ಬಂಧಿಸಿದ್ದರು.

ತೇಜ್ಪಾಲ್ ವಿರುದ್ಧ ಭಾರತೀಯ ದಂಡಸಂಹಿತೆ (ಐಪಿಸಿ)376 (ಅತ್ಯಾಚಾರ), 376 (2) (ಅಧಿಕಾರ ದುರ್ಬಳಕೆ ಮಾಡಿಕೊಂಡು ತನ್ನ ಅಧೀನ ಸಹೋದ್ಯೋಗಿ ಮೇಲೆ ಅತ್ಯಾಚಾರ) ಸೇರಿದಂತೆ ಹಲವು ಕಲಂಗಳಡಿ
ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.