ಭಾನುವಾರ, ಜೂನ್ 20, 2021
29 °C

ತೈಲದ ಅವಲಂಬನೆ: ಒಬಾಮ ಎಚ್ಚರಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಾಷಿಂಗ್ಟನ್ (ಪಿಟಿಐ): ಹೆಚ್ಚು ಜನಸಂಖ್ಯೆಯನ್ನು ಹೊಂದಿರುವ ಭಾರತ, ಚೀನಾ ಮತ್ತು ಬ್ರೆಜಿಲ್‌ನಂತಹ ರಾಷ್ಟ್ರಗಳ ಇಂಧನ ಬೇಡಿಕೆ ಹೆಚ್ಚುತ್ತಿರುವುದರಿಂದ ದೀರ್ಘಾವಧಿಯಲ್ಲಿ ಜಾಗತಿಕವಾಗಿ ತೈಲ ಬೆಲೆ ಹೆಚ್ಚಲಿದೆ ಎಂದು ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮ ಅವರು ಎಚ್ಚರಿಸಿದ್ದಾರೆ.ಚೀನಾದಲ್ಲಿ 2010ರಲ್ಲಿ 10 ದಶಲಕ್ಷ ಕಾರುಗಳನ್ನು ಜನರು ಖರೀದಿಸಿದ್ದಾರೆ. ಅದೇ ರೀತಿ ಭಾರತ ಮತ್ತು ಬ್ರೆಜಿಲ್‌ನಲ್ಲೂ ಜನರ ಜೀವನ ಮಟ್ಟ ಉತ್ತಮವಾಗುತ್ತಿರುವುದರಿಂದ ವಾಹನಗಳ ಖರೀದಿ ಹೆಚ್ಚುತ್ತಿದೆ.ಇದರಿಂದ ಇಂಧನ ಬೇಡಿಕೆ ಒಂದೇ ಸವನೆ ಏರುತ್ತಿದೆ ಎಂದು ಅವರು ತಿಳಿಸಿದ್ದಾರೆ. ನಾವು ಸಾಂಪ್ರದಾಯಿಕ ಮೂಲಗಳನ್ನೇ ನೆಚ್ಚಿಕೊಳ್ಳಲು ಸಾಧ್ಯವಿಲ್ಲ. ಬದಲಿಗೆ ನವೀಕರಿಸಬಹುದಾದ ಇಂಧನ ಉತ್ಪಾದನೆಗೆ ಹೆಚ್ಚಿನ ಬಂಡವಾಳ ಹೂಡಬೇಕು ಎಂದು ಒಬಾಮ ತಿಳಿಸಿದ್ದಾರೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.