ಮಂಗಳವಾರ, ಜೂನ್ 15, 2021
20 °C

ತೈಲ ಘಟಕ ದುರಂತ: ಮೂವರ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಡ್ಯ: ತಾಲ್ಲೂಕಿನ ತೂಬಿನಕೆರೆ ಕೈಗಾರಿಕಾ ಪ್ರದೇಶದ ಸಂಪತ್‌ ರಿಫೈನರಿ ತೈಲ ಘಟಕದಲ್ಲಿ ಉಸಿರುಗಟ್ಟಿ ಐವರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟಕದ ಮಾಲೀಕರೂ ಸೇರಿದಂತೆ ಮೂವರನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.ಘಟಕದ ಮಾಲೀಕರಾದ ಅರುಣ್‌, ಕುಮಾರ್‌ ಹಾಗೂ ಮ್ಯಾನೇಜರ್‌ ಅಮೃತರಾಜ್‌ ಅವರನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ ಎಂದು ಸರ್ಕಲ್‌ ಇನ್‌ಸ್ಪೆಕ್ಟರ್‌ ಲೋಕೇಶ್‌ ‘ಪ್ರಜಾವಾಣಿ’ಗೆ ತಿಳಿಸಿದರು.ಪಾರ್ಥಿವ ಶರೀರಗಳನ್ನು ಸಂಬಂಧಿಕರ ವಶಕ್ಕೆ ಒಪ್ಪಿಸಲಾಗಿದ್ದು, ಕಾರ್ಖಾನೆ­ಯವರು ಮೃತದೇಹಗಳನ್ನು ಅವರ ಊರಿಗೆ ಕಳುಹಿಸಿಕೊಡುವ ವ್ಯವಸ್ಥೆ ಮಾಡುವುದಾಗಿ ತಿಳಿಸಿದ್ದಾರೆ ಎಂದು ಲೋಕೇಶ್ ಹೇಳಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.