ತೈಲ ಬೆಲೆ ಏರಿಕೆ ವಿರೋಧಿಸಿ ಪ್ರತಿಭಟನೆ

6

ತೈಲ ಬೆಲೆ ಏರಿಕೆ ವಿರೋಧಿಸಿ ಪ್ರತಿಭಟನೆ

Published:
Updated:

ವಿಜಾಪುರ: ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳ ವಿರೋಧಿಸಿ ಭಾರತೀಯ ಜನತಾ ಪಕ್ಷ ಮತ್ತು ಎಸ್‌ಯುಸಿಐನ ವರು ಪ್ರತ್ಯೇಕವಾಗಿ ಪ್ರತಿಭಟನೆ ನಡೆಸಿದರು. ಬಿಜೆಪಿಯವರು ಕಾರನ್ನು ಎತ್ತಿನ ಗಾಡಿಯಿಂದ ಎಳೆಯಿಸಿ, ಬಸವೇಶ್ವರ ಚೌಕ್‌ನಿಂದ ಜಿಲ್ಲಾಧಿಕಾರಿಗಳ ಕಚೇರಿ ವರೆಗೆ ಪಾದಯಾತ್ರೆ ನಡೆಸಿದರು.ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎಸ್.ಕೆ. ಬೆಳ್ಳುಬ್ಬಿ ಮಾತನಾಡಿ, ಡೀಸೆಲ್, ಪೆಟ್ರೋಲ್, ಅಡುಗೆ ಅನಿಲ ಸಿಲಿಂಡರ್‌ಗಳ ಬೆಲೆಯನ್ನು ನಿರಂತರವಾಗಿ ಹೆಚ್ಚಿಸುವ ಮೂಲಕ ಕೇಂದ್ರ ಸರ್ಕಾರ ಜನಸಾಮಾನ್ಯರ ಬದುಕಿನ ಜೊತೆ ಚೆಲ್ಲಾ ಟವಾಡುತ್ತಿದೆ ಎಂದು ದೂರಿದರು.ಕೇಂದ್ರ ಯುಪಿಎ ಸರ್ಕಾರದ ಅಸಮರ್ಪಕ ಆರ್ಥಿಕ ನೀತಿಗಳಿಂದಾಗಿ ರೂಪಾಯಿ ಮೌಲ್ಯ ಕುಸಿಯುತ್ತಿದೆ.  ರೂಪಾಯಿ ಮೌಲ್ಯ ಕುಸಿತ ತಡೆಗೆ ಅಗತ್ಯ ಸುಧಾರಣಾ ಕ್ರಮ ಕೈಗೊಳ್ಳದೆ ಬೆಲೆ ಹೆಚ್ಚಳ ಮಾಡಲಾಗುತ್ತಿದೆ. ಪ್ರಧಾನಿ ಮನಮೋಹನ್ ಸಿಂಗ್ ಮತ್ತು ಹಣಕಾಸು ಸಚಿವ ಪಿ.ಚಿದಂಬರಂ ದೇಶದ ಆರ್ಥಿಕ ವ್ಯವಸ್ಥೆಯ ನಿರ್ವಹಣೆ ಯಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ ಎಂದು ಆಪಾದಿಸಿದರು.ಪಕ್ಷದ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಚಂದ್ರಶೇಖರ ಕವಟಗಿ, ಎಂ.ಎಸ್. ರುದ್ರಗೌಡರ, ಸೋಮನ ಗೌಡ ಪಾಟೀಲ ಸಾಸನೂರ, ಮಾರುತಿ ಬಂಡಿ, ಚಿದಾನಂದ ಚಲವಾದಿ, ಹಣ ಮಂತ, ಸುರೇಶ ಕಿರಣಗಿ, ವಿಶ್ವನಾಥ ಬಬಲೇಶ್ವರ, ಪ್ರಭುಗೌಡ ಬಿರಾದಾರ, ಭಿಮಾಶಂಕರ ಹದನೂರ, ಶಿವರುದ್ರ ಬಾಗಲಕೋಟೆ ಇತರರು ಪ್ರತಿಭಟನೆ ಯಲ್ಲಿ ಪಾಲ್ಗೊಂಡಿದ್ದರು. ಎಸ್.ಯು.ಸಿ.ಐ. ಸಂಘಟನೆಯವರು ಗಾಂಧಿ ಚೌಕ್‌ನಲ್ಲಿ ಬೈಕ್‌ಗೆ ಹಗ್ಗ ಕಟ್ಟಿ ಎಳೆದು ಪ್ರತಿಭಟನೆ ನಡೆಸಿದರು.ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಪೆಟ್ರೋಲ್ ದರವನ್ನು ಪ್ರತಿ ಲೀಟರ್‌ಗೆ ರೂ.2.35  ಮತ್ತು ಡೀಸೆಲ್ ದರವನ್ನು 50 ಪೈಸೆ ಹೆಚ್ಚಿಸಿವೆ. ಪ್ರಧಾನಿ ಮನಮೋಹನಸಿಂಗ್ ಅವರು ಪೆಟ್ರೋಲ್ ದರ ನಿಯಂತ್ರಣ ನನ್ನ ಕೈಯಲ್ಲಿ ಇಲ್ಲ ಎಂದು ಹೇಳುತ್ತಿರು ವುದು ನಿಜಕ್ಕೂ ನಾಚಿಕೆಗೇಡಿನ ಸಂಗತಿ ಎಂದು ಹಿರಿಯ ಸಾಹಿತಿ ಮಹಾಂತ ಗುಲಗಂಜಿ ಟೀಕಿಸಿದರು.ಮಲ್ಲಕಾರ್ಜುನ ಮಾತನಾಡಿ, ಬಂಡವಾಳಶಾಹಿ ವ್ಯವಸ್ಥೆಯಲ್ಲಿ ಬೆಲೆ ಏರಿಕೆ, ಬಡತನ, ನಿರುದ್ಯೋಗದಂತಹ ಸಮಸ್ಯೆಗಳು ದಿನೇ ದಿನೇ ಹೆಚ್ಚಾಗುತ್ತಿವೆ.  ಬಂಡವಾಳಶಾಹಿ ವ್ಯವಸ್ಥೆ ಕಿತ್ತೊಗೆದು ಸಮಾಜವಾದಿ ಕ್ರಾಂತಿಗೆ ಪೂರಕವಾದ ಹೋರಾಟಗಳನ್ನು ಕಟ್ಟಲು ಜನ ಸಜ್ಜಾಗಬೇಕು ಎಂದರು.ಎಸ್.ಎಲ್. ಹಿರೇಮಠ ಮಾತನಾಡಿ ದರು. ಬಾಳು ಜೇವೂರ, ಸಿದ್ಧಲಿಂಗ ಬಾಗೇವಾಡಿ, ಭರತ್‌ಕುಮಾರ ಎಚ್. ಟಿ., ಉಮೇಶ ಬಿ.ಆರ್., ಶಿವಬಾಳಮ್ಮ ಉಪ್ಪಾರ, ಬಸಮ್ಮ ಹತ್ತರಕಿ, ಗೀತಾ, ಶೋಭಾ, ಶ್ರಿದೇವಿ ಲಿಗಾಡೆ ಇತರರು ಪ್ರತಿಭಟನೆಯಲ್ಲಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry