ತೊಗರಿಗೆ ಬೆಂಬಲ ಬೆಲೆಗೆ ಆಗ್ರಹಿಸಿ ರೈತರಿಂದ ವಿಷ ಸೇವನೆ

7

ತೊಗರಿಗೆ ಬೆಂಬಲ ಬೆಲೆಗೆ ಆಗ್ರಹಿಸಿ ರೈತರಿಂದ ವಿಷ ಸೇವನೆ

Published:
Updated:

ಜೇವರ್ಗಿ: ಬೆಂಬಲ ಬೆಲೆಯಲ್ಲಿ ತೊಗರಿ ಖರೀದಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವ ರೈತರ ಪೈಕಿ 12 ಮಂದಿ ಶುಕ್ರವಾರ ಇಲ್ಲಿ ಉಪವಿಭಾಗಾಧಿಕಾರಿ ಮತ್ತು ತಹಸೀಲ್ದಾರರ ಸಮ್ಮುಖದಲ್ಲಿಯೇ ಸಾಮೂಹಿಕವಾಗಿ ವಿಷ ಸೇವಿಸಿದ ಘಟನೆ ನಡೆದಿದೆ. ಈ ಪೈಕಿ ನಾಲ್ವರ ಸ್ಥಿತಿ ಗಂಭೀರವಾಗಿದ್ದು, ಗುಲ್ಬರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.ಈ ಘಟನೆ ಹಿನ್ನೆಲೆಯಲ್ಲಿ ಸರ್ಕಾರದ ರೈತ ವಿರೋಧಿ ನೀತಿ ಧೋರಣೆಯನ್ನು ಖಂಡಿಸಿ ಶನಿವಾರ (ಫೆ. 5) ಜೇವರ್ಗಿ ಬಂದ್‌ಗೆ ಕರೆ ನೀಡಲಾಗಿದೆ. ರೈತರ ಸಾಮೂಹಿಕ ಆತ್ಮಹತ್ಯೆ ಯತ್ನಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ, ಕೃಷಿ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಕೇಸು ದಾಖಲಿಸಲು ರೈತ ಹೋರಾಟ ಸಮಿತಿ ನಿರ್ಧರಿಸಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry