ಶುಕ್ರವಾರ, ಮೇ 27, 2022
28 °C

ತೊಗರಿ: ಬೆಂಬಲ ಬೆಲೆಗೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಂಚೋಳಿ: ಜಿಲ್ಲೆಯಲ್ಲಿ ತೊಗರಿ ಬೆಳೆಗಾರರು ತಮ್ಮ ಉತ್ಪನ್ನಕ್ಕೆ ಸೂಕ್ತ ಬೆಲೆ ಸಿಗದೇ ಕಂಗಾಲಾಗಿದ್ದು, ತೊಗರಿ ಬೆಳೆಗಾರರ ಹಿತ ಕಾಯುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಫಲವಾಗಿವೆ ಎಂದು ಪ್ರಾಂತ ರೈತ ಸಂಘ ಆರೋಪಿಸಿದೆ.ಸಂಘದ ಕಾರ್ಯಕರ್ತರು ಇಲ್ಲಿನ ಬಸ್ ನಿಲ್ದಾಣದ ಎದುರು ಶುಕ್ರವಾರ ಮಧ್ಯಾಹ್ನ ಪ್ರತಿಭಟನೆ ನಡೆಸಿ ತಹಸೀಲ್ದಾರ ಬಿ.ಕೃಷ್ಣಪ್ಪನವರಿಗೆ ಬೇಡಿಕೆಗಳ ಮನವಿ ಪತ್ರ ಸಲ್ಲಿಸಿದರು.

ಪ್ರತಿ ಕ್ವಿಂಟಾಲ್ ತೊಗರಿ ಬೆಳೆಗೆ 5 ಸಾವಿರ ರೂ. ಬೆಂಬಲ ಬೆಲೆ ನಿಗದಿ ಪಡಿಸಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಕ್ರಮ ಕೈಗೊಳ್ಳಬೇಕು, ಅತಿವೃಷ್ಟಿಯಿಂದ ಹಾನಿಯಾದ ಮುಂಗಾರು ಬೆಳೆಗಳಿಗೆ ಎಕರೆಗೆ 10 ಸಾವಿರ ರೂ.ಗಳಂತೆ ಪರಿಹಾರ ನೀಡಬೇಕು, ಬೆಳೆ ವಿಮೆ ಮಂಜೂರು ಮಾಡಿಸಬೇಕು, ತೊಗರಿ ಬೇಳೆಯನ್ನು ಪ್ರತಿ ಬಿಪಿಎಲ್ ಕಾರ್ಡ್‌ಗೆ ತಿಂಗಳಿಗೆ ಐದು ಕೆ.ಜಿ ರಿಯಾಯಿತಿ ದರದಲ್ಲಿ ನೀಡಬೇಕು, ಗುಲ್ಬರ್ಗದಲ್ಲಿರುವ ಬೇಳೆಕಾಳು ಸಂಶೋಧನಾ ಕೇಂದ್ರವನ್ನು ಅಭಿವೃದ್ಧಿ ಪಡಿಸಬೇಕು, ಹಾಗೂ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತರಲು ಉದ್ದೇಶಿಸಿರುವುದನ್ನು ಕೈಬಿಡಬೇಕು ಎಂಬ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿದರು.ಪ್ರತಿಭಟನೆಯಲ್ಲಿ ಸಂಘದ ತಾಲ್ಲೂಕು ಕಾರ್ಯದರ್ಶಿ ಶರಣಬಸಪ್ಪ ಮಮಶೆಟ್ಟಿ, ಗೋವಿಂದ ಕೊರವಿ, ಪ್ರದೀಪ ತಿರ್ಲಾಪೂರ, ಜಯಶ್ರೀ ದೊಡ್ಮನಿ, ನಾಗಣ್ಣ ಗಡ್ಡಿ, ರವಿ ಕಿಣ್ಣಿ, ಸಿದ್ದು ಹಲಚೇರಾ ಮುಂತಾದವರು ಇದ್ದರು. ಸಹಾಯಕ ಸಬ್ ಇನ್ಸ್‌ಪೆಕ್ಟರ್ ಸುಭಾಷ್ಚಂದ್ರ ಬಿರಾದಾರ, ರಾಣಪ್ಪ ಮುಂತಾದವರು ಸೂಕ್ತ ಪೊಲೀಸ್ ಬಂದೋಬಸ್ತ ಕೈಗೊಂಡಿದ್ದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.