ಶುಕ್ರವಾರ, ಮೇ 7, 2021
19 °C

ತೋಟಗಾರಿಕೆ ತರಬೇತಿಗಾಗಿ ಅರ್ಜಿ ಆಹ್ವಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಳ್ಳಾರಿ: ತೋಟಗಾರಿಕೆ ಇಲಾಖೆಯು ಜಿಲ್ಲೆಯ ರೈತರ ಮಕ್ಕಳಿಗೆ ಸ್ವಯಂ ಉದ್ಯೋಗ ಕೈಗೊಳ್ಳುವ ನಿಟ್ಟಿನಲ್ಲಿ ನೆರವಾಗಲು ತೋಟಗಾರಿಕಾ ತರಬೇತಿಗಾಗಿ ಅರ್ಜಿ ಆಹ್ವಾನಿಸಿದೆ.ಈ ತರಬೇತಿಯನ್ನು ಆಯ್ದ 25 ಅಭ್ಯರ್ಥಿಗಳಿಗೆ ಕೂಡ್ಲಿಗಿ ತಾಲ್ಲೂಕಿನ ಚಿಕ್ಕಜೋಗಿಹಳ್ಳಿ ತರಬೇತಿ ಕೇಂದ್ರದಲ್ಲಿ ನೀಡಲಾಗುವುದು. ತರಬೇತಿ ಅವಧಿಯು 10 ತಿಂಗಳಿನದ್ದಾಗಿದ್ದು, ಪುರುಷ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ. ಅಭ್ಯರ್ಥಿಗಳು ತಮ್ಮ ಪಾಲಕರ ಹೆಸರಿನಲ್ಲಿ  ಜಮೀನು ಹೊಂದಿರುವ, ವ್ಯವಸಾಯ ಮಾಡುತ್ತಿರುವ ವಿವರ ಸಲ್ಲಿಸಬೇಕು.ಅಭ್ಯರ್ಥಿ 10ನೇ ತರಗತಿ ಉತ್ತೀರ್ಣರಾಗಿದ್ದು, 18ರಿಂದ 30 ವರ್ಷ ವಯೋಮಿತಿ ಒಳಗಿರಬೇಕು. ಭರ್ತಿ ಮಾಡಿದ ಅರ್ಜಿಗಳನ್ನು ಏಪ್ರಿಲ್ 23ರೊಳಗಾಗಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ರಾಜ್ಯ  ವಲಯ), ಬಳ್ಳಾರಿ ಅಥವಾ ಜಿಲ್ಲೆಯ ಎಲ್ಲ ತಾಲ್ಲೂಕು ತೋಟಗಾರಿಕೆ ಕಚೇರಿಗಳಲ್ಲಿ ಸಲ್ಲಿಸಬಹುದು.

 

ಅಭ್ಯರ್ಥಿಗಳ ಆಯ್ಕೆಗಾಗಿ ಏಪ್ರಿಲ್ 27ರಂದು ಬೆಳಿಗ್ಗೆ 10ಕ್ಕೆ ಬಳ್ಳಾರಿಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಯಲ್ಲಿ ಸಂದರ್ಶನ ನಡೆಯಲಿದೆ. ತರಬೇತಿಗೆ ಸೇರಬಯಸುವವರು ರೂ  1000 ಭದ್ರತಾ ಠೇವಣಿ ತುಂಬಬೇಕು.ಆಸಕ್ತ ಅಭ್ಯರ್ಥಿಗಳು ಸಂದರ್ಶನದ ವೇಳೆ ವಿದ್ಯಾರ್ಹತೆ ಅಂಕಪಟ್ಟಿ, ಹುಟ್ಟಿದ ದಿನಾಂಕದ ಪ್ರಮಾಣ ಪತ್ರ, ಪಹಣಿ, ಜಾತಿ ಪ್ರಮಾಣ ಪತ್ರ ಹಾಗೂ ಇತರ ಅಗತ್ಯ ದಾಖಲೆಗಳ ಮೂಲಪ್ರತಿ ಹಾಜರುಪಡಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.