ತ್ಯಾಜ್ಯ ನಿರ್ವಹಣೆ ಕಾರ್ಯಗಾರಕ್ಕೆ ಚಾಲನೆ
ಮಡಿಕೇರಿ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆ ವತಿಯಿಂದ ನಗರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜೈವಿಕ ವೈದ್ಯಕೀಯ ತ್ಯಾಜ್ಯ ನಿರ್ವಹಣೆ ಕುರಿತ ಮೂರು ದಿನಗಳ ಕಾರ್ಯಾಗಾರಕ್ಕೆ ಇಂದು ಚಾಲನೆ ನೀಡಲಾಯಿತು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಚ್.ಎಸ್. ಶಿವಕುಮಾರ್ ಅವರು ಕಾರ್ಯಗಾರದಲ್ಲಿಭಾಗವಹಿಸಿ ಮಾತನಾಡಿ ಜಿಲ್ಲೆಯ ಪ್ರಾಥಮಿಕ, ಸಮುದಾಯ ಮತ್ತು ಜಿಲ್ಲಾ ಆಸ್ಪತ್ರೆಗಳಲ್ಲಿನ ನಾನಾ ತ್ಯಾಜ್ಯಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡುವ ಬಗ್ಗೆ ಹಲವು ಸಲಹೆಗಳನ್ನು ನೀಡಿದರು.
ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆಯ ಯೋಜನಾ ಅಭಿವೃದ್ದಿ ಅಧಿಕಾರಿ ಡಾ.ಎಸ್.ಜೆ.ವಿಕಾಸ್ ಅವರು ಮಾತನಾಡಿ ಜೈವಿಕ ವೈದ್ಯಕೀಯ ತ್ಯಾಜ್ಯ ನಿರ್ವಹಣೆ ಬಗ್ಗೆ ಹಲವು ಮಾಹಿತಿ ನೀಡಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.