ಭಾನುವಾರ, ಮೇ 22, 2022
21 °C
ಅಲ್ಲಮಪ್ರಭು ಪಾಟೀಲ ಪ್ರಶ್ನೆಗೆ ಸಚಿವರ ಉತ್ತರ

`ತ್ರೈಮಾಸಿಕ ಅನುದಾನ: ವೇತನ ವಿಳಂಬ'

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗುಲ್ಬರ್ಗ: ವಸತಿ ಶಾಲೆಗಳ ನಿರ್ವಹಣೆಗೆ ತ್ರೈಮಾಸಿಕ ಕಂತುಗಳಲ್ಲಿ ಅನುದಾನ ಬಿಡುಗಡೆಯಾಗುತ್ತಿರುವುದರಿಂದ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಿಂದ ನೇಮಕಗೊಂಡ ಸಿಬ್ಬಂದಿ ವೇತನ ಪಾವತಿಯಲ್ಲಿ ವಿಳಂಬ ಉಂಟಾಗಿದೆ ಎಂದು  ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ ತಿಳಿಸಿದರು.ವಿಧಾನ ಪರಿಷತ್‌ನಲ್ಲಿ ಸೋಮವಾರ ಪರಿಷತ್ ಸದಸ್ಯ ಅಲ್ಲಮಪ್ರಭು ಪಾಟೀಲ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಶಿಕ್ಷಣ ಇಲಾಖೆಯಲ್ಲಿ ನೇಮಕಗೊಂಡಿರುವುದರಿಂದ ವಸತಿ ಶಾಲೆ ಶಿಕ್ಷಕರ ಹುದ್ದೆಗೆ ಸಿಬ್ಬಂದಿ ರಾಜೀನಾಮೆ ನೀಡುತ್ತಿದ್ದಾರೆ. ವೇತನವನ್ನು ಪ್ರತಿ ಮಾಸ ಬಿಡುಗಡೆ ಮಾಡಲು ಸರ್ಕಾರಿ ನೌಕರರಿಗೆ ಚಾಲ್ತಿಯಲ್ಲಿರುವ ಎಚ್.ಆರ್. ಎಂ.ಎಸ್. ಮಾದರಿಯ ತಂತ್ರಜ್ಞಾನ ಅಭಿವೃದ್ಧಿ ಪಡಿಸಲಾಗುತ್ತಿದೆ ಎಂದರು.ಇ-ಪಡಿತರ ಯಂತ್ರ ಸ್ಥಾಪನೆಗೆ ಕ್ರಮ: ಪಡಿತರ ವಿತರಣಾ ವ್ಯವಸ್ಥೆ ಬಲಗೊಳಿಸಲು ಗುಲ್ಬರ್ಗ ಜಿಲ್ಲೆಯ ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ವಿಶೇಷ ಸಾಮರ್ಥ್ಯ ಹೊಂದಿದ ಇ-ಪಡಿತರ ಯಂತ್ರ ಸ್ಥಾಪನೆ ಮಾಡುವ ಕಾರ್ಯ ಪ್ರಗತಿಯಲ್ಲಿದೆ ಎಂದು ರಾಜ್ಯ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ದಿನೇಶ್ ಗುಂಡೂರಾವ್ ವಿಧಾನ ಪರಿಷತ್‌ನಲ್ಲಿ ತಿಳಿಸಿದರು. ಯಾದಗಿರಿ ಜಿಲ್ಲೆಯಲ್ಲಿಯೂ ಸದ್ಯದಲ್ಲಿಯೇ ಇ-ಪಡಿತರ ಯಂತ್ರಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.ಇಎಸ್‌ಐ-ಜಿಲ್ಲಾ ಆಸ್ಪತ್ರೆ ಒಪ್ಪಂದ: ಕೆಂದ್ರ ಸರ್ಕಾರದ ಇ.ಎಸ್.ಐ. ವತಿಯಿಂದ ಗುಲ್ಬರ್ಗದಲ್ಲಿ ವೈದ್ಯಕೀಯ ಕಾಲೇಜನ್ನು  ಹೊಸದಾಗಿ ಪ್ರಾರಂಭಿಸಲಾಗುತ್ತಿದ್ದು, ಈ ಕಾಲೇಜಿನ ವಿದ್ಯಾರ್ಥಿಗಳ ಕ್ಲಿನಿಕಲ್ ಸೌಲಭ್ಯಕ್ಕಾಗಿ ಜಿಲ್ಲಾ ಆಸ್ಪತ್ರೆಯೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು  ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ ಸೋಮವಾರ ವಿಧಾನ ಪರಿಷತ್‌ನಲ್ಲಿ ತಿಳಿಸಿದರು.ಅಲ್ಲಮಪ್ರಭು ಪಾಟೀಲ ಅವರು ಗುಲ್ಬರ್ಗ ಜಿಲ್ಲಾ ಆಸ್ಪತ್ರೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಪ್ರಾರಂಭಿಸಲು ಸರ್ಕಾರ ಉದ್ದೇಶಿಸಿದೆಯೇ? ಎಂದು ಕೇಳಿದ ಪ್ರಶ್ನೆಗೆ ಅವರು ಉತ್ತರಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.