ಮಂಗಳವಾರ, ಮೇ 18, 2021
22 °C

ತ್ವರಿತವಾಗಿ ಪೂರ್ಣಗೊಳಿಸಲು ಸಿಎಂ ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: `ನಮ್ಮ ಮೆಟ್ರೊ' ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಅಧಿಕಾರಿಗಳಿಗೆ ಸೂಚನೆ ನೀಡಿದರು.ಗೃಹ ಕಚೇರಿ `ಕೃಷ್ಣಾ'ದಲ್ಲಿ ನಡೆದ ಮೆಟ್ರೊ ಕಾಮಗಾರಿಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. `ನಮ್ಮ ಮೆಟ್ರೊ' ವ್ಯವಸ್ಥಾಪಕ ನಿರ್ದೇಶಕ ಎನ್.ಶಿವಶೈಲಂ ಅವರು ಮೆಟ್ರೊ ಕಾಮಗಾರಿಯ ಪ್ರಗತಿಯನ್ನು ಪ್ರಾತ್ಯಕ್ಷಿಕೆ ಮೂಲಕ ವಿವರಿಸಿದರು. `2013ರ ಮಾರ್ಚ್ ವೇಳೆಗೆ ಮೊದಲ ಹಂತದ ಮೆಟ್ರೊ ಕಾಮಗಾರಿ (42.30 ಕಿ.ಮೀ ಉದ್ದ) ಪೂರ್ಣಗೊಳ್ಳಬೇಕಿತ್ತು. ಆದರೆ, ಅದು ಇನ್ನೂ ಎರಡು ವರ್ಷ ವಿಳಂಬವಾಗುವ ಸಾಧ್ಯತೆ ಇದೆ. ಅಂದಾಜಿನ ಪ್ರಕಾರ 2015ರ ಮಾರ್ಚ್ ವೇಳೆಗೆ ಪೂರ್ಣಗೊಳ್ಳಲಿದೆ' ಎಂದು ಶಿವಶೈಲಂ ವಿವರಿಸಿದರು ಎನ್ನಲಾಗಿದೆ.`ನಗರದಲ್ಲಿ ಸಂಚಾರ ದಟ್ಟಣೆ ಜಾಸ್ತಿಯಾಗಿ ಜನ ಪರದಾಡುತ್ತಿದ್ದಾರೆ. ಹೀಗಾಗಿ ಆದಷ್ಟು ಬೇಗ ಮೆಟ್ರೊ ಕಾಮಗಾರಿಯನ್ನು ಪೂರ್ಣಗೊಳಿಸಬೇಕು. ಅನಗತ್ಯ ವಿಳಂಬಕ್ಕೆ ಅವಕಾಶ ನೀಡಬಾರದು' ಎಂದು ಅಧಿಕಾರಿಗಳಿಗೆ ಸೂಚಿಸಿದರು ಎಂದು ಮೂಲಗಳು ತಿಳಿಸಿವೆ.ಮೆಟ್ರೊ ಕಾಮಗಾರಿಯಿಂದಾಗಿ ರಸ್ತೆಗಳು ಹಾಳಾಗಿದ್ದು, ತಕ್ಷಣ ದುರಸ್ತಿಗೊಳಿಸುವಂತೆಯೂ ಅವರು ಅಧಿಕಾರಿಗಳಿಗೆ ಸೂಚಿಸಿದರು ಎನ್ನಲಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.