ಮಂಗಳವಾರ, ಮೇ 18, 2021
30 °C

ಥಣಿಸಂದ್ರ ಭೂಹಗರಣ: ಎಚ್‌ಡಿಕೆ, ಚನ್ನಿಗಪ್ಪಗೆ ನೋಟಿಸ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಥಣಿಸಂದ್ರದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಸ್ವಾಧೀನದಲ್ಲಿದ್ದ ಭೂಮಿಯನ್ನು ಕಾನೂನುಬಾಹಿರವಾಗಿ ಭೂಸ್ವಾಧೀನ ಪ್ರಕ್ರಿಯೆಯಿಂದ ಕೈಬಿಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತ ಪೊಲೀಸರು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತು ಮಾಜಿ ಸಚಿವ ಸಿ.ಚನ್ನಿಗಪ್ಪ ಅವರಿಗೆ ನೋಟಿಸ್ ಜಾರಿ ಮಾಡಿದ್ದಾರೆ.ಚಾಮರಾಜನಗರದ ಸಂತೆಮರಳ್ಳಿಯ ಮಹದೇವಸ್ವಾಮಿ ಅವರು ಸಲ್ಲಿಸಿರುವ ಖಾಸಗಿ ದೂರಿನ ತನಿಖೆ ಮುಕ್ತಾಯ ಹಂತದಲ್ಲಿದೆ. ಈ ಹಿನ್ನೆಲೆಯಲ್ಲಿ ಇಬ್ಬರು ಆರೋಪಿಗಳನ್ನೂ ಪ್ರಶ್ನಿಸಲು ತನಿಖಾಧಿಕಾರಿ ನಿರ್ಧರಿಸಿದ್ದಾರೆ. ಸೋಮವಾರ ಮಧ್ಯಾಹ್ನ ಇಬ್ಬರಿಗೂ ನೋಟಿಸ್ ಜಾರಿ ಮಾಡಲಾಗಿದೆ.  ಆರೋಪಗಳಿಗೆ ಸಂಬಂಧಿಸಿದಂತೆ ದಾಖಲೆಗಳಿದ್ದಲ್ಲಿ ವಿಚಾರಣೆ ವೇಳೆ ಹಾಜರುಪಡಿಸಬಹುದೆಂದು ನೋಟಿಸ್‌ನಲ್ಲಿ ಸೂಚಿಸಲಾಗಿದೆ ಎಂದು ಲೋಕಾಯುಕ್ತ ಪೊಲೀಸ್ ಮೂಲಗಳು ತಿಳಿಸಿವೆ.ಸೋಮವಾರ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ ಬೆಂಗಳೂರು ನಗರ ವಿಭಾಗದ ಲೋಕಾಯುಕ್ತ ಇನ್‌ಸ್ಪೆಕ್ಟರ್ ಬಿ.ವೈ.ರೇಣುಕಾಪ್ರಸಾದ್ ನೋಟಿಸ್ ನೀಡಿದ್ದಾರೆ.  ಕುಮಾರ ಸ್ವಾಮಿ ಅಸಮಾಧಾನ ಸೂಚಿಸಿ ನೋಟಿಸ್ ತಂದ ಅಧಿಕಾರಿಗಳನ್ನು ತಕ್ಷಣ ಭೇಟಿ ಮಾಡದೇ ಸತಾಯಿಸಿದ್ದಾರೆ ಎಂದು ಗೊತ್ತಾಗಿದೆ.ಎರಡು ದಿನಗಳೊಳಗೆ ತನಿಖಾಧಿಕಾರಿ ಎದುರು ಹಾಜರಾಗುವಂತೆ ನೋಟಿಸ್‌ನಲ್ಲಿ ಸೂಚಿಸಲಾಗಿತ್ತು. ಆದರೆ, ವಕೀಲರ ಮೂಲಕ ಮಂಗಳವಾರ ಲೋಕಾಯುಕ್ತ ಪೊಲೀಸರಿಗೆ ಮನವಿ ಪತ್ರ ಸಲ್ಲಿಸಿರುವ ಕುಮಾರಸ್ವಾಮಿ, ಎರಡು ವಾರ ಕಾಲಾವಕಾಶ ಕೋರಿದ್ದಾರೆ. ಬರ ಪೀಡಿತ ಪ್ರದೇಶಗಳಲ್ಲಿ ಪ್ರವಾಸ ಕೈಗೊಂಡಿರುವ ಹಿನ್ನೆಲೆಯಲ್ಲಿ  ತನಿಖಾಧಿಕಾರಿ ಎದುರು ಹಾಜರಾಗಲು ಸಾಧ್ಯವಾಗುತ್ತಿಲ್ಲ ಎಂಬ ಕಾರಣ ನೀಡಿದ್ದಾರೆ ಎನ್ನಲಾಗಿದೆ.ಇನ್‌ಸ್ಪೆಕ್ಟರ್ ಸಂಜೀವರಾಯಪ್ಪ ಅವರು ಚನ್ನಿಗಪ್ಪ ಅವರನ್ನು ಭೇಟಿ ಮಾಡಿ ನೋಟಿಸ್ ಜಾರಿ ಮಾಡಿದ್ದಾರೆ. ಬುಧವಾರ ತನಿಖಾಧಿಕಾರಿ ಎದುರು ಹಾಜರಾಗುವುದಾಗಿ ಅವರು ತಿಳಿಸಿದ್ದಾರೆ ಎಂದು ಮೂಲಗಳು ಹೇಳಿವೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.