ಮಂಗಳವಾರ, ಮೇ 24, 2022
24 °C

ಥಾಮಸ್ ನೇಮಕ: ಇಂದು ತೀರ್ಪು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ಕೇರಳದಲ್ಲಿ ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಪಿ.ಜೆ. ಥಾಮಸ್ ಅವರನ್ನು ಕೇಂದ್ರ ಜಾಗೃತ ಆಯುಕ್ತರಾಗಿ ನೇಮಕ ಮಾಡಿದ್ದನ್ನು ಪ್ರಶ್ನಿಸಿ ಸಲ್ಲಿಸಲಾದ್ದ ಅರ್ಜಿ ಕುರಿತ ತೀರ್ಪನ್ನು ಸುಪ್ರೀಂಕೋರ್ಟ್ ಶುಕ್ರವಾರ ಪ್ರಕಟಿಸಲಿದೆ.ಮುಖ್ಯ ನ್ಯಾಯಮೂರ್ತಿ ಎಸ್.ಎಚ್. ಕಪಾಡಿಯಾ ಮತ್ತು ನ್ಯಾಯಮೂರ್ತಿಗಳಾದ ಕೆ.ಎಸ್. ರಾಧಾಕೃಷ್ಣನ್, ಸ್ವತಂತರ್ ಕುಮಾರ್ ಅವರನ್ನು ಒಳಗೊಂಡ ಪೀಠವು ಫೆಬ್ರುವರಿ 10ರಂದು ತೀರ್ಪನ್ನು ಕಾಯ್ದಿರಿಸಿತ್ತು. ಸ್ವಯಂ ಸೇವಾ ಸಂಸ್ಥೆ ಸೆಂಟರ್ ಫಾರ್ ಪಬ್ಲಿಕ್ ಇಂಟೆರೆಸ್ಟ್ ಲಿಟಿಗೇಶನ್ (ಸಿಪಿಐಎಲ್) ಮತ್ತು ನಿವೃತ್ತ ಮುಖ್ಯ ಚುನಾವಣಾ ಆಯುಕ್ತ ಜೆ.ಎಂ. ಲಿಂಗ್ಡೊ ಸೇರಿದಂತೆ ನಿವೃತ್ತ ಅಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳು ಥಾಮಸ್ ಅವರ ನೇಮಕವನ್ನು ಪ್ರಶ್ನಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.