ಬ್ಯಾಂಕಾಕ್ (ಪಿಟಿಐ): ಸರ್ಕಾರಿ ವಿರೋಧಿ ಪ್ರತಿಭಟನೆ ಮಧ್ಯೆಯೇ ಗುರುವಾರ ತಮ್ಮ 86ನೇ ಹುಟ್ಟುಹಬ್ಬ ಆಚರಿಸಿಕೊಂಡ ಥಾಯ್ಲೆಂಡ್ ದೊರೆ ಭೂಮಿಬಲ್ ಅದುಲŀದೇಜ್, ಸ್ಥಿರತೆ ಮತ್ತು ಸುರಕ್ಷತೆಗಾಗಿ ಶ್ರಮಿಸುವಂತೆ ದೇಶದ ಜನತೆಗೆ ಕರೆ ನೀಡಿದ್ದಾರೆ. ತಮ್ಮ ಹುಟ್ಟುಹಬ್ಬದ ಪ್ರಯುಕ್ತ ಜನರನ್ನುದ್ದೇಶಿಸಿ ಮಾತನಾಡಿದ ಅದುಲ್ಯದೇಜ್, ‘ಎಲ್ಲರೂ ಒಟ್ಟಾಗಿ ದುಡಿಯುತ್ತಿರುವುದರಿಂದ ದೇಶ ಇಲ್ಲಿಯವರೆಗೂ ಶಾಂತಿಯುತವಾಗಿದೆ’ ಎಂದು ಹೇಳಿದರು.

ಪ್ರಧಾನಿ ಯಿಂಗ್ಲುಕ್ ಶಿನವಾತ್ರ ರಾಜೀನಾಮೆಗೆ ಆಗ್ರಹಿಸಿ ದೇಶದಲ್ಲಿ ತಾರಕ್ಕಕ್ಕೇರಿರುವ ಸರ್ಕಾರಿ ವಿರೋಧಿ ಪ್ರತಿಭಟನೆ ಕುರಿತು ತಮ್ಮ ಭಾಷಣದಲ್ಲಿ ನೇರವಾಗಿ ಏನನ್ನೂ ಪ್ರಸ್ತಾಪಿಸದ ದೊರೆ, ‘ದೇಶದ ಸ್ಥಿರತೆ ಮತ್ತು ಸುರಕ್ಷತೆಯನ್ನು ಕಾಪಾಡುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ತಮ್ಮ ಪಾತ್ರವನ್ನು ಅರಿತು ಕಾರ್ಯಪ್ರವೃತ್ತರಾಗಬೇಕು’ ಎಂದರು.

ಯಿಂಗ್ಲುಕ್ ಅವರ ರಾಜೀನಾಮೆಗೆ ಆಗ್ರಹಿಸಿ ಬ್ಯಾಂಕಾಕ್ನಲ್ಲಿ ಕಳೆದ ಒಂದು ವಾರದಿಂದ ಪ್ರತಿಭಟನೆ ನಡೆಯುತ್ತಿದೆ. ಈ ವೇಳೆ, ಭದ್ರತಾ ಪಡೆ ಮತ್ತು ಹೋರಾಟಗಾರರ ಮಧ್ಯೆ ನಡೆದ ಘರ್ಷಣೆಯಲ್ಲಿ ಇದುವರೆಗೂ ಐವರು ಮೃತಪಟ್ಟು, 200ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.