ಬೆಂಗಳೂರು: ಹಾಸನದಲ್ಲಿ ನಡೆದ ಕೊಲೆ ಪ್ರಕರಣದಲ್ಲಿ ಅಧೀನ ನ್ಯಾಯಾಲಯದಿಂದ ಮರಣದಂಡನೆಗೆ ಗುರಿಯಾಗಿದ್ದ ದಂಡುಪಾಳ್ಯ ತಂಡದ ದೊಡ್ಡಹನುಮ ಮತ್ತು ಇತರ ಐವರನ್ನು ಹೈಕೋರ್ಟ್ ಗುರುವಾರ ಖುಲಾಸೆ ಮಾಡಿದೆ.

ಕೃಷ್ಣ, ವೆಂಕಟೇಶ, ವೆಂಕಟರಾಮ, ತಿಮ್ಮ, ಚಿಕ್ಕ ಮುನಿಯಪ್ಪ ಅವರು ಗಲ್ಲು ಶಿಕ್ಷೆಯಿಂದ ಪಾರಾಗಿರುವ ಇತರರು.

ಇವರಿಗೆ ಗಲ್ಲು ಶಿಕ್ಷೆ ವಿಧಿಸಿ ಇಲ್ಲಿನ ಪರಪ್ಪನ ಅಗ್ರಹಾರದಲ್ಲಿರುವ 34ನೇ ಹೆಚ್ಚುವರಿ ನಗರ ಮತ್ತು ಸೆಷನ್ಸ್ ನ್ಯಾಯಾಲಯ 2010ರಲ್ಲಿ ಆದೇಶಿಸಿತ್ತು.

ಇದನ್ನು ಪ್ರಶ್ನಿಸಿ ಆರೂ ಜನ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ನ್ಯಾಯಮೂರ್ತಿಗಳಾದ ಡಾ.ಕೆ. ಭಕ್ತವತ್ಸಲ ಮತ್ತು ಕೆ.ಎನ್. ಕೇಶವ ನಾರಾಯಣ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

‘ಇವರು ಅಪರಾಧ ಕೃತ್ಯದಲ್ಲಿ ಭಾಗಿಯಾಗಿದ್ದರು ಎಂದು ಸಾಬೀತುಪಡಿಸಲು ಸೂಕ್ತ ಸಾಕ್ಷ್ಯಾಧಾರಗಳಿಲ್ಲ. ಇವರಿಂದ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ ಎಂಬ ಒಂದೇ ಕಾರಣಕ್ಕೆ ಇವರೇ ಕೊಲೆಗಾರರು ಎಂದು ಆರೋಪಿಸಲಾಗಿದೆ. ಆದರೆ ಇದಕ್ಕೆ ಸರಿಯಾದ ಪುರಾವೆಗಳಿಲ್ಲ’ ಎಂದು ಪೀಠ ಹೇಳಿದೆ.

ಸದ್ಯಕ್ಕೆ ಬಿಡುಗಡೆ ಇಲ್ಲ
‘ಕೊಲೆ, ಅತ್ಯಾಚಾರ ಸೇರಿದಂತೆ ಹಲವು ಗಂಭೀರ ಸ್ವರೂಪದ ಅಪರಾಧ ಪ್ರಕರಣಗಳಲ್ಲಿ ದಂಡುಪಾಳ್ಯ ತಂಡದ ಸದಸ್ಯರು ಭಾಗಿಯಾಗಿದ್ದಾರೆ. ಹಾಸನದಲ್ಲಿ ನಡೆದಿದ್ದ ಕೊಲೆ ಪ್ರಕರಣದಲ್ಲಿ ಮಾತ್ರ ಅವರಿಗೆ ಖುಲಾಸಿ ಆಗಿದೆ. ಉಳಿದ ಪ್ರಕರಣಗಳ ವಿಚಾರಣೆ ಬಾಕಿ ಇರುವುದರಿಂದ ಅವರು ಸದ್ಯಕ್ಕೆ ಬಿಡುಗಡೆಯಾಗುವುದಿಲ್ಲ’ ಎಂದು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಕಮಿಷನರ್ ಕಮಲ್ಪಂತ್ ‘ಪ್ರಜಾವಾಣಿ’ಗೆ ತಿಳಿಸಿದರು.

ದೆಹಲಿ ಅತ್ಯಾಚಾರ ಪ್ರಕರಣ: ಗಲ್ಲು ಕಾಯಂ
ನವದೆಹಲಿ: ರಾಜಧಾನಿ ದೆಹಲಿಯಲ್ಲಿ 2012ರ ಡಿಸೆಂಬರ್್ 16ರಂದು ಪ್ಯಾರಾಮೆಡಿಕಲ್್ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ನಾಲ್ವರು ಅಪರಾಧಿಗಳಿಗೆ ವಿಚಾರಣಾ ನ್ಯಾಯಾಲಯ ವಿಧಿಸಿದ್ದ ಮರಣ ದಂಡನೆಯನ್ನು ದೆಹಲಿ ಹೈಕೋರ್ಟ್ ಗುರುವಾರ ಎತ್ತಿ ಹಿಡಿದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.